ಲಯನ್ಸ್ ಕ್ಲಬ್ ಸುಳ್ಯ ಹಾಗೂ ಪ್ರಣವ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಅಂಗ ಸಂಸ್ಥೆಯಾದ ಪ್ರಣವ ಚಾರಿಟೇಬಲ್ ಟ್ರಸ್ಟ್ ಇವರ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇದರ ಸಹಯೋಗದೊಂದಿಗೆ ಆಧಾರ್ ನೋಂದಣಿ ಮತ್ತು ಪರಿಷ್ಕರಣಾ ಶಿಬಿರ ಹಾಗೂ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಅ. 14 ಶನಿವಾರದಂದು ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ನಡೆಯಲಿದೆ.
ಶಿಬಿರದಲ್ಲಿ ಆಧಾರ್ ಗೆ ಸಂಬಂಧಿಸಿದ ಎಲ್ಲಾ ಸೇವೆಗಳನ್ನು ಸಾರ್ವಜನಿಕರು ಪಡೆದುಕೊಳ್ಳಬಹುದು ಹಾಗೂ ಉಚಿತವಾಗಿ ವಿವಿಧ ಆರೋಗ್ಯ ತಪಾಸಣಾ ಸೇವೆಗಳು ದೊರೆಯಲಿದೆ.
ಆರೋಗ್ಯ ತಪಾಸಣಾ ಶಿಬಿರದಲ್ಲಿ ನೀಡುವ ಆಯುರ್ವೇದ ಕಾರ್ಡ್ ಪಡೆದಲ್ಲಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾದ ಸಂದರ್ಭದಲ್ಲಿ ಚಿಕಿತ್ಸೆಯ ವೆಚ್ಚದಲ್ಲಿ ರಿಯಾಯಿತಿಯನ್ನು ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.