2021-22ನೇ ಸಾಲಿನ ಗಾಂಧಿ ಗ್ರಾಮ ಪ್ರಶಸ್ತಿ ಪುರಸ್ಕೃತ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಬಂಡಿ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ತಂಡ ಅ.9ರಂದು ಅರಂತೋಡು ಗ್ರಾಮ ಪಂಚಾಯಿತಿಗೆ ಅಧ್ಯಯನ ಪ್ರವಾಸ ಕೈಗೊಂಡಿದ್ದರು.
ಆರಂತೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಘನ ತ್ಯಾಜ್ಯ ಘಟಕ ಅಮೃತ ಉದ್ಯಾನವನ, ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ, ಆರಂತೋಡು ಗ್ರಾಮ ಪಂಚಾಯತಿ ಕಛೇರಿ , ಗ್ರಾ.ಪಂ.ನ ಅಮೃತ ಸಭಾಭವನ ಹಾಗೂ ಅರಂತೋಡು ತೊಡಿಕಾನ ಕೃಷಿ ಪತ್ತಿನ ಸಹಕಾರಿ ಸಂಘದ ಸಮೃದ್ಧಿ ಮಾರ್ಟ್ ಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿಅರಂತೋಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೇಶವ ಅಡ್ತಲೆ, ಉಪಾಧ್ಯಕ್ಷೆ ಶ್ರೀಮತಿ ಭವಾನಿ ಚಿಟ್ಟನೂರು, ಸದಸ್ಯರುಗಳಾದ ಶ್ರೀಮತಿ ಮಾಲಿನಿ ವಿನೋದ್ ಉಳುವಾರು, ವೆಂಕಟರಮಣ ಪೆತ್ತಾಜೆ ರವೀಂದ್ರ ಪೂಜಾರಿ ಪಂಜಿಕೋಡಿ, ಶ್ರೀ ಪುಷ್ಪಧರ ಕೋಡಂಕೇರಿ ಶಿವಾನಂದ ಕುಕ್ಕುಂಬಳ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಎಂ.ಆರ್., ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.