ಕೆ.ವಿ.ಜಿ. ಮೆಡಿಕಲ್ ಕಾಲೇಜಿನ ಮನೋವೈದ್ಯಕೀಯ ವಿಭಾಗದ ಆಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅ. 10ರಂದು ನಡೆಯಿತು.
ಮಾನಸಿಕ ಆರೋಗ್ಯವು ಸಾರ್ವತ್ರಿಕ ಮಾನವ ಹಕ್ಕು ಎಂಬ ಘೋಷಣೆಯಡಿಯಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎ.ಇ.ಎಲ್.ಇ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ವಹಿಸಿದ್ದರು. ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜನ್ ಕಾರ್ಯಕ್ರಮ ಉದ್ಘಾಟಿಸಿದರು. ಮನೋವೈದ್ಯಕೀಯ ವಿಭಾಗದ ಮುಖ್ಯಸ್ಥೆ ಡಾ. ಪೂನಂ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು.
ಅನುಶ್ರೀ ಪ್ರಾರ್ಥಿಸಿದರು. ಡಾ. ನರೇಂದ್ರ ಸ್ವಾಗತಿಸಿ, ಡಾ. ಯಶವಂತ್ ವಂದಿಸಿದರು. ಡಾ. ನರೇಂದ್ರ ಕಾರ್ಯಕ್ರಮ ನಿರೂಪಿಸಿದರು. ದ್ವಿತೀಯ ನರ್ಸಿಂಗ್ ವಿದ್ಯಾರ್ಥಿಗಳು ಕಿರು ನಾಟಕ ಪ್ರದರ್ಶಿಸಿದರು. ಮನಶ್ಶಾಸ್ತ್ರಜ್ಞೆ ನಮ್ರತಾ ಕುತ್ಯಾಳ ಮಾರ್ಗದರ್ಶನ ನೀಡಿದ್ದರು.
ಕೆ.ವಿ.ಜಿ. ಜನರಲ್ ನರ್ಸಿಂಗ್ ಪ್ರಾಂಶುಪಾಲರಾದ ಶ್ರೀಮತಿ ಚಂದ್ರಾವತಿ, ಬಿ.ಎಸ್.ಸಿ ನರ್ಸಿಂಗ್ ಪ್ರಾಂಶುಪಾಲೆ ಶ್ರೀಮತಿ ಪ್ರೇಮ, ಫಿಸಿಯೋಥೆರಪಿ ವಿಭಾಗದ ಪ್ರಾಂಶುಪಾಲರಾದ ಸಾಯಿರಾಂ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.