ಮುಕ್ಕೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಕಾಲು ಬಾಯಿ ಲಸಿಕಾ ಕಾರ್ಯಕ್ರಮ

0

ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘ, ದ.ಕ. ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ಪಶುಸಂಗೋಪನಾ ಇಲಾಖೆ ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ನಾಲ್ಕನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮಕ್ಕೆ ಉಪಾಧ್ಯಕ್ಷ ಗಣೇಶ್ ಶೆಟ್ಟಿ ಅವರ ಮನೆಯಲ್ಲಿ ಚಾಲನೆ ನೀಡಲಾಯಿತು.
ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ , ಪಶು ವೈದ್ಯಾಧಿಕಾರಿ ಡಾ. ಸೂರ್ಯನಾರಾಯಣ ಭಟ್ ಅವರಿಗೆ ಲ‌ಸಿಕೆ ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು.
ಸಂಘದ ನಿರ್ದೇಶಕರುಗಳಾದ ಗುಡ್ಡಪ್ಪ ಗೌಡ ಅಡ್ಯತಕಂಡ, ದಯಾನಂದ ರೈ ಕನ್ನೆಜಾಲು,ಕೇಶವ ಗೌಡ ಕಂಡಿಪ್ಪಾಡಿ ಹಾಗೂ ಕಾರ್ಯದರ್ಶಿ ಸರಿತ ಉಪಸ್ಥಿತರಿದ್ದರು.