ದ. ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ವತಿಯಿಂದ ಮಂಗಳೂರಿನ ಪುರಭವನದಲ್ಲಿ ಅಕ್ಟೋಬರ್ 18 ರಂದು ಕಾಂಗ್ರೆಸ್ ಸಮಾವೇಶ ಮತ್ತು ಸನ್ಮಾನ ಸಮಾರಂಭ ನಡೆಯಲಿದ್ದು, ಇದರ ಪೂರ್ವಭಾವಿ ಸಭೆ ಮತ್ತು ಸುಳ್ಯ ಬ್ಲಾಕ್ ಅಲ್ಪ ಸಂಖ್ಯಾತರ ಘಟಕದ ವಿಶೇಷ ಸಭೆ ಘಟಕದ ಅಧ್ಯಕ್ಷರಾದ ಇಸ್ಮಾಯಿಲ್ ಪಡ್ಪಿನಂಗಡಿ ಇವರ ಅಧ್ಯಕ್ಷತೆಯಲ್ಲಿ ಸುಳ್ಯ ಶಿವಕೃಪಾ ಸಭಾoಗಣದಲ್ಲಿ ಜರಗಿತು.
ಸಭೆಯಲ್ಲಿ ಭಾಗವಹಿಸಿದ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಶಾಹುಲ್ ಹಮೀದ್ ಮಾಹಿತಿ ನೀಡಿ
” ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಬೃಹತ್ ಜಿಲ್ಲಾ ಸಮಾವೇಶ ಅಕ್ಟೋಬರ್ 18 ಬುಧವಾರದಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದ್ದು ಸಮಾವೇಶದಲ್ಲಿ ಸುಮಾರು 5 ಸಾವಿರಕ್ಕೂ ಮಿಕ್ಕಿದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಸಮಾವೇಶದಲ್ಲಿ ಅಲ್ಪಸಂಖ್ಯಾತ ಸಮುದಾಯದ ಹಕ್ಕುಗಳು ಮತ್ತು ಬೇಡಿಕೆಗಳನ್ನು ಮಂಡಿಸಿ ಠರಾವುಗಳನ್ನು ಅಂಗೀಕರಿಸಲಾಗುವುದು.
ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಿಡಬ್ಲ್ಯುಸಿ ಸದಸ್ಯರಾಗಿ ನೇಮಕಗೊಂಡ ರಾಜ್ಯಸಭಾ ಸದಸ್ಯರಾದ ನಾಸಿರ್ ಹುಸೈನ್ ಮತ್ತು ಸರಕಾರದ ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾಗಿ ನೇಮಕಗೊಂಡ ವಿಧಾನಪರಿಷತ್ ಶಾಸಕರಾದ ಸಲೀಂ ಅಹಮದ್ ಅವರನ್ನು ಸನ್ಮಾನಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಸಮಾರಂಭದಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯಾಧ್ಯಕ್ಷರು ವಿಧಾನ ಪರಿಷತ್ ಶಾಸಕ ಅಬ್ದುಲ್ ಜಬ್ಬಾರ್ ಮತ್ತು ಸಚಿವರುಗಳು, ರಾಜ್ಯ, ಜಿಲ್ಲಾ ಕಾಂಗ್ರೆಸ್ ನಾಯಕರುಗಳು ಭಾಗವಹಿಸಲಿದ್ದಾರೆ” ಎಂದು ತಿಳಿಸಿದರು.
ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಂ.ಮುಸ್ತಫ ವಿಷಯ ಪ್ರಸ್ತಾವನೆಗೈದರು. ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಕಾರ್ಯದರ್ಶಿ ಹಬೀಬುಲ್ಲಾ ಕಣ್ಣೂರು, ಜಿಲ್ಲಾ ಅಲ್ಪಸಂಖ್ಯಾತ ವಿಭಾಗದ ಪ್ರಧಾನ ಕಾರ್ಯದರ್ಶಿ ಅಲ್ವಿನ್ ಪ್ರಕಾಶ್, ಖಜಾಂಚಿ ಮಹಮ್ಮದ್, ಕೆಪಿಸಿಸಿ ಸಂಯೋಜಕ ಎಸ್.ಸಂಶುದ್ದೀನ್, ಕೆಪೆಕ್ ಮಾಜಿ ನಿರ್ದೇಶಕ ಪಿ.ಎ.ಮಹಮ್ಮದ್
ಡಿಸಿಸಿ ಕಾರ್ಯದರ್ಶಿ ಮಹಮ್ಮದ್ ಕುಂಞ ಗೂನಡ್ಕ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಹಸೈನಾರ್ ಹಾಜಿ ಗೋರಡ್ಕ, ಎ.ಕೆ.ಇಬ್ರಾಹಿಂ, ಜಿಲ್ಲಾ ಕಾರ್ಯದರ್ಶಿ ಮೋನಾಲಿಸಾ ಸoಘಟನಾ ಕಾರ್ಯದರ್ಶಿ
ಯೂಸುಫ್ ಅಂಜಿಕಾರ್, ಮೂಸೆ ಕುಂಞ್ಞಿ ಪೈಂಬೆಚ್ಚಾಲ್, ಅಬೂಬಕ್ಕರ್ ಅಡ್ಕಾರ್,
ಸುಳ್ಯ ನಗರ ಪಂಚಾಯತ್ ಸದಸ್ಯರುಗಳಾದ ಶರೀಫ್ ಕಂಠಿ, ರಿಯಾಜ್ ಕಟ್ಟೆಕ್ಕಾರ್ಸ್, ಇಂಟಕ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ , ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸಿದ್ದಿಕ್ ಕೊಕ್ಕೊ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಪದಾಧಿಕಾರಿಗಳಾದ ಕಾರ್ಯದರ್ಶಿ ಡೇವಿಡ್ ಧೀರ ಕ್ರಾಸ್ತ, ಅಡ್ವೋಕೇಟ್ ರಾಬಿಯಾ,
ಪೆರುವಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀಮತಿ ಶಹನಾಜ್,
ತಾಜ್ ಅರಂತೋಡು, ಝುಬೈರ್ ಆರಂತೋಡು,
ಅಬೂಬಕರ್ ಪಾರೆಕ್ಕಲ್, ಮಹಮ್ಮದ್ ಮುಟ್ಚತ್ತೋಡಿ, ಇಬ್ರಾಹಿಂ ನೀರಬಿದಿರೆ, ಹಸೈನಾರ್ ಗುತ್ತಿಗಾರು, ಲೂಕಸ್ ಟಿ.ಐ., ಜಂಶೀರ್ ಸಾಲೆಕ್ಕಾರ್, ಶಹೀದ್ ಪಾರೆ, ಇಕ್ಬಾಲ್ ಸುಣ್ಣಮೂಲೆ
ಮೊದಲಾದವರು ಉಪಸ್ಥಿತರಿದ್ದರು.