ಸವಣೂರಿನಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ

0

ಪುತ್ತೂರಿನ ದರ್ಬೆಯ ಪ್ರಶಾಂತ್ ಮಹಲ್ ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಸವಣೂರು ಕೆ. ಸೀತಾರಾಮ ರೈಯವರು ಅಧ್ಯಕ್ಷರಾಗಿರುವ ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಧಾನ ಕಚೇರಿಗೆ ನೂತನ ಕಟ್ಟಡ ನಿರ್ಮಾಣಕ್ಕೆ ಸವಣೂರಿನ ಸುಬ್ರಹ್ಮಣ್ಯ ರಸ್ತೆ ಬದಿಯಲ್ಲಿ ಶಂಕುಸ್ಥಾಪನೆ ಕಾರ್ಯಕ್ರಮ ಅ. 15ರಂದು‌ ನಡೆಯಿತು.


ಶ್ರೀ ಗುರುದೇವದತ್ತ ಸಂಸ್ಥಾನಂ ಶ್ರೀ ಕ್ಷೇತ್ರ ಒಡಿಯೂರು ಇಲ್ಲಿಯ ಪರಮಪೂಜ್ಯ ಗುರುದೇವಾನಂದ ಸ್ವಾಮೀಜಿಯವರು ಶಂಕುಸ್ಥಾಪನೆ ನೆರವೇರಿಸಿ ಆಶೀರ್ವಚನ ನೀಡಿದರು. ಸುಳ್ಯದ ಶಾಸಕಿ ಕು. ಭಾಗೀರಥಿ ಮುರುಳ್ಯ ಸಭಾಧ್ಯಕ್ಷತೆ ವಹಿಸಿದ್ದರು ಕಡಬ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಮತ್ತು ಸವಣೂರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸುಂದರಿ ಬಿ.ಎಸ್ ಅತಿಥಿಗಳಾಗಿ ಭಾಗವಹಿಸಿದ್ದರು.

ಸಂಘದ ಮಹಾಪ್ರಬಂಧಕರಾದ ವಸಂತ ಜಾಲಾಡಿ ಮತ್ತು ಶ್ರೀಮತಿ ಕಸ್ತೂರಿಕಲಾ ಎಸ್.ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷರಾದ ಸವಣೂರು ಕೆ. ಸೀತಾರಾಮ ರೈ ಪ್ರಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಮಹಾಪ್ರಬಂಧಕರಾದ ವಸಂತ್ ಜಾಲಾಡಿ ವಂದಿಸಿದರು. ಸಂಸ್ಥೆಯ ಸಿಬ್ಬಂದಿ ಶ್ರೀಮತಿ ಪ್ರಜ್ಞಾಶ್ರೀ ಪ್ರಾರ್ಥಿಸಿದರು.

ಸವಣೂರು ಸಿ.ಎ. ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಸಿ ಕಾರ್ಯಕ್ರಮ ನಿರೂಪಿಸಿದರು. ಗಾಂಧಿಪುರಸ್ಕಾರಕ್ಕೆ ಪಾತ್ರವಾದ ಕಡಬ ತಾಲೂಕಿಗೆ ಒಳಪಟ್ಟ ಸವಣೂರು ಗ್ರಾ.ಪಂ.ನ ಅಧ್ಯಕ್ಷೆ ಶ್ರೀಮತಿ ಸುಂದರಿ ಬಿ.ಎಸ್, ಮಾಜಿ ಅಧ್ಯಕ್ಷೆ ಶ್ರೀಮತಿ ರಾಜೀವಿ ಶೆಟ್ಟಿ ಮತ್ತು ಆ ಸಂದರ್ಭದಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಮನ್ಮಥರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಸವಣೂರು ವಿದ್ಯಾರಶ್ಮಿ ಸಮೂಹ ವಿದ್ಯಾಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿಮತ್ತು ಶ್ರೀಮತಿ ರಶ್ಮಿ ಅಶ್ವಿನ್ ಶೆಟ್ಟಿ ಒಡಿಯೂರು ಶ್ರೀಯವರಿಗೆ ಫಲಪುಷ್ಪ ನೀಡಿದರು.