ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಪ್ರಾರಂಭ

0

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವವು ಅ.14 ರಿಂದ ಪ್ರಾರಂಭಗೊಂಡಿದ್ದು
ಅ.23 ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.


ಅ.14 ರಂದು ರಾತ್ರಿ ಗಂಟೆ 8.00 ಕ್ಕೆ ಕ್ಷೇತ್ರದ ರಂಗಪೂಜೆ ನಡೆಯಿತು.
ನಂತರ ಭಕ್ತಾದಿಗಳ ಸಾಮೂಹಿಕ ರಂಗಪೂಜೆ,ಬಳಿಕ ಮಹಾಪೂಜೆ ನಡೆದ ಬಳಿಕ ಅನ್ನಸಂತರ್ಪಣೆ ನಡೆಯಿತು.


ಅ.23 ರವರೆಗೆ ಪ್ರತೀದಿನ ಮಧ್ಯಾಹ್ನ ಮತ್ತು ಸಂಜೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ ತಿಳಿಸಿದ್ದಾರೆ.