ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಕದಿರು ವಿನಿಯೋಗ, ನವಾನ್ನ ಭೋಜನ

0

ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಅ.17ರಂದು ಮಧ್ಯಾಹ್ನ ನವಾನ್ನ ಭೋಜನ ನಡೆಯಿತು.

ನವರಾತ್ರಿ ಉತ್ಸವದ ಪ್ರಯುಕ್ತ ಬೆಳಿಗ್ಗೆ ದೇವಾಲಯದಲ್ಲಿ ಕದಿರು ವಿನಿಯೋಗ, ಮಧ್ಯಾಹ್ನ ಶ್ರೀ ಸುಬ್ರಹ್ಮಣ್ಯ ಸ್ವಾಮಿಗೆ ಮಹಾಪೂಜೆ, ನವಾನ್ನ ಭೋಜನ ನೆರವೇರಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಮೊಕ್ತೇಸರ ಗುರುರಾಜ್ ಭಟ್ ಅಡ್ಕಾರು, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯರಾಮ ರೈ ಜಾಲ್ಸೂರು, ವ್ಯವಸ್ಥಾಪನ ಸಮಿತಿಯ ಸದಸ್ಯರುಗಳು, ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ವಿವಿಧ ಬೈಲುವಾರು ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.