ಗುತ್ತಿಗಾರು: ಹೃದಯಾಘಾತದಿಂದ ಮಹಿಳೆ ಮೃತ್ಯು

0

ಗುತ್ತಿಗಾರಿನಲ್ಲಿ ಗ್ಯಾರೇಜ್ ನಡೆಸುತ್ತಿರುವ ಕಾಂತಪ್ಪ ಪೂಜಾರಿಯವರ ಪತ್ನಿ ನೀತಾ ಕುಮಾರಿ ಅ.19 ರಂದು ಹೃದಯಾಘಾತದಿಂದ ನಿಧನರಾದರು.
ಅವರಿಗೆ ಬೆಳಗ್ಗೆ ಹೃದಯಾಘಾತವಾಗಿದ್ದು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆದಾಗಲೇ ಮೃತಪಟ್ಟಿದ್ದರೆನ್ನಲಾಗಿದೆ. ಅವರಿಗೆ 43 ವರ್ಷ ವಯಸ್ಸಾಗಿತ್ತು. ಮೃತರು ಪತಿ, ಮಕ್ಕಳಾದ ಪ್ರಜ್ಞಾ, ನಿಶಿತ ಹಾಗೂ ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.