ಸೌಜನ್ಯ ನ್ಯಾಯ ಪರ ಹೋರಾಟ ಸಮಿತಿ ಸುಳ್ಯ ತಾಲೂಕು ಇದರ ವತಿಯಿಂದ ಅ.22 ರಂದು ರಾತ್ರಿ ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿಗಳು ಪತ್ತೆಯಾಗಬೇಕು ಎಂದು ಸಾಮೂಹಿಕ ಪ್ರಾರ್ಥನೆ ನಡೆಯಲಿದೆ ಎಂದು ಸೌಜನ್ಯ ಪರ ಹೋರಾಟ ಸಮಿತಿ ತಿಳಿಸಿದೆ. ಈ ವೇಳೆ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.