ಎನ್ನೆಂಸಿ ಮಾನವಿಕ ಸಂಘ, ‘ಕಲಾಸ್ಪಂದನ’ದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಕಾರ್ಯಕ್ರಮ

0

ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ಕಲಾ ಪದವಿ ವಿಭಾಗದ ಮಾನವಿಕ ಸಂಘ ಕಲಾಸ್ಪಂದನದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವು ಅಕ್ಟೋಬರ್ 18 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರುದ್ರಕುಮಾರ್ ಎಂ.ಎಂ ವಹಿಸಿದ್ದರು. ಕಲಾಸ್ಪಂದನದ ವಾರ್ಷಿಕ ಚಟುವಟಿಕೆಯನ್ನು ಕಾಲೇಜಿನ ಹಳೆ ವಿದ್ಯಾರ್ಥಿ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ಲಾಂಛನವನ್ನು ಬಿಡುಗಡೆಗೊಳಿಸುವ ಮೂಲಕ ಉದ್ಘಾಟಿಸಿದರು. ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಬಾಲಚಂದ್ರ ಗೌಡ ಎಂ ಮತ್ತು ವಿದ್ಯಾರ್ಥಿ ಕ್ಷೇಮಾಪಾಲನಾಧಿಕಾರಿಯಾಗಿರುವ ಶ್ರೀಮತಿ ರತ್ನಾವತಿ.ಡಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಕಾಲೇಜಿನ ಸಂಯೋಜಕರಾದ ಡಾ. ಮಮತಾ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಾನವಿಕ ಸಂಘದ ಸಂಚಾಲಕರಾದ ಪ್ರೊ.ತಿಪ್ಪೇಸ್ವಾಮಿ ಡಿ.ಎಚ್ ಇವರು ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಲಾ ವಿಭಾಗದ ವಿದ್ಯಾರ್ಥಿಗಳಾದ ಶ್ರೀಲಯ ಪ್ರಾರ್ಥಿಸಿ, ಕೃಷ್ಣವೇಣಿ ಸ್ವಾಗತಿಸಿದಳು ಮತ್ತು ಹರ್ಷಿತ ಅತಿಥಿಗಳನ್ನು ಪರಿಚಯಿಸಿ ವರ್ಷಿಣಿ ವಂದನಾರ್ಪಣೆಗೈದರು. ಗಾನ ಬಿ ಡಿ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರಾದ ಡಾ. ವಿಜಯಲಕ್ಷ್ಮಿ ಎನ್ ಎಸ್ ಮತ್ತು ವಿಷ್ಣುಪ್ರಶಾಂತ್ ಬಿ ಕಾರ್ಯಕ್ರಮಕ್ಕೆ ಸಹಕರಿಸಿದರು.


ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಂಡು ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ಕಾರ್ಯಕ್ರಮದಲ್ಲಿ ಎಲ್ಲಾ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.