ಐವರ್ನಾಡಿನಲ್ಲಿ ಯುವಶಕ್ತಿ ಸಂಘದ ವತಿಯಿಂದ ಶ್ರೀ ಶಾರದೋತ್ಸವ ಆರಂಭ

0

ಇಂದು ಸಂಜೆ ಸಭಾಕಾರ್ಯಕ್ರಮ,ಸನ್ಮಾನ – ಸಾಂಸ್ಕೃತಿಕ ಕಾರ್ಯಕ್ರಮ

ಯುವಶಕ್ತಿ ಸಂಘ ಐವರ್ನಾಡು, ಸಾರ್ವಜನಿಕರ ಸಹಕಾರದೊಂದಿಗೆ 19 ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವವು ಅ.21 ರಂದು ಬೆಳಿಗ್ಗೆ ಪ್ರಾರಂಭಗೊಂಡಿದ್ದು
ಅ.22 ರವರೆಗೆ ವಿವಿಧ ಧಾರ್ಮಿಕ , ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಐವರ್ನಾಡು ಸ.ಹಿ.ಪ್ರಾ.ಶಾಲಾ ಮಡ್ತಿಲ ಪುರುಷೋತ್ತಮ ಗೌಡ ಸ್ಮಾರಕ ರಂಗಮಂದಿರದಲ್ಲಿ ವಿಜೃಂಭಣೆಯಿಂದ ನಡೆಯಲಿದೆ.

ಬೆಳಿಗ್ಗೆ ಗಣಹೋಮ ಮತ್ತು ಶ್ರೀ ಶಾರದಾ ದೇವಿಯ ಪ್ರತಿಷ್ಠಾಪನೆ ನಡೆಯಿತು.
ಬಳಿಕ ಐವರ್ನಾಡು ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯುತ್ತಿದೆ.
ಪೂರ್ವಾಹ್ನ ಗಂಟೆ 11 .30 ರಿಂದ ಗುರುದೇವಾ ಭಜನಾ ಮಂಡಳಿ ಐವರ್ನಾಡು ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ ಗಂಟೆ 12.30 ಕ್ಕೆ ಮಹಾಪೂಜೆ,ಪ್ರಸಾದ ವಿತರಣೆ ನಡೆಯಲಿದೆ.
ಸಂಜೆ ಗಂಟೆ 6.30 ರಿಂದ ಪ್ರಾಥಮಿಕ ಶಾಲಾ ಮಕ್ಕಳ ಹಾಗೂ ಅಂಗನವಾಡಿ ಮಕ್ಕಳ ಡ್ಯಾನ್ಸ್ ನಡೆಯಲಿದೆ.
ರಾತ್ರಿ ಗಂಟೆ 7.30 ರಿಂದ ಸಾಂಸ್ಕೃತಿಕ ಸಂಜೆ ನಡೆಯಲಿದೆ.
ಕರ್ನಾಟಕ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಭರತ್ ಮುಂಡೋಡಿ, ಕೆವಿಜಿ ಐಟಿಐ ತರಬೇತಿ ಸಂಸ್ಥೆಯ ಕಚೇರಿ ಅಧೀಕ್ಷಕ ಭವಾನಿಶಂಕರ ಅಡ್ತಲೆ, ಗ್ರಾಮ ಪಂಚಾಯತ್ ಸದಸ್ಯ ಯೋಗೀಶ ಕಲ್ಲಗದ್ದೆ ಉಪಸ್ಥಿತರಿರುವರು.

ಸನ್ಮಾನ
ನಿವೃತ್ತ ಶಿಕ್ಷಕಿಯರಾದ ಶ್ರೀಮತಿ ರತ್ನಾವತಿ,ಶ್ರೀಮತಿ ಹರಿಣಾಕ್ಷಿ, ಪ್ರತಿಭಾನ್ವಿತ ವಿದ್ಯಾರ್ಥಿನಿ ಕು.ದ್ವಿತಿ ಎಸ್ ರವರನ್ನು ಸನ್ಮಾನಿಸಲಾಗುವುದು.ರಾತ್ರಿಗಂಟೆ 9.30 ಕ್ಕೆ ಮಹಾಪೂಜೆ,ಪ್ರಸಾದ ವಿತರಣೆ ನಡೆಯಲಿದೆ.
ಅಮೋಘ ಸಿಡಿಮದ್ದಿನ ಪ್ರದರ್ಶನ ನಡೆಯಲಿದೆ.
ಬಳಿಕ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಲಿದೆ.
ರಾತ್ರಿ ಗಂಟೆ 9.30 ರಿಂದ ಹಿತೇಶ್ ಕಾಪಿನಡ್ಜ ಸಾರಥ್ಯದ ಝೀ ಕನ್ನಡ ಕಾಮಿಡಿ ಕಿಲಾಡಿಗಳು ಖ್ಯಾತಿಯ ಕಲಾವಿದರಿಂದ “ಕಾಮಿಡಿ ಟೈಮ್ಸ್”
ಫ್ಯೂಷನ್ ಇನ್ಸಿಟ್ಯೂಟ್ ಆಫ್ ಡ್ಯಾನ್ಸ್ ತಂಡದವರಿಂದ “ಡ್ಯಾನ್ಸ್ ಡ್ಯಾನ್ಸ್” ಯುವಶಕ್ತಿ ಸದಸ್ಯರಿಂದ “ಕಾರ್ಯಕ್ರಮ ವೈವಿಧ್ಯ” ಪೆರುಮಾಳ್ ಲಕ್ಷ್ಮಣ ಬಳಗದವರಿಂದ ಭಕ್ತಿಗೀತೆಗಳು ನಡೆಯಲಿದೆ.
ಅ.22 ರಂದು ಬೆಳಿಗ್ಗೆ ಗಂಟೆ 9.00 ರಿಂದ ಉಳ್ಳಾಕುಳು ಭಜನಾ ತಂಡ ಐವರ್ನಾಡು ಇವರಿಂದ ಕುಣಿತ ಭಜನೆ ನಡೆಯಲಿದೆ.
ನಂತರ ಅಕ್ಷರಾಭ್ಯಾಸ, ಆಯುಧ ಪೂಜೆ ನಡೆಯಲಿದೆ.
ಬೆಳಿಗ್ಗೆ ಗಂಟೆ 10.00 ರಿಂದ ಶ್ರೀ ಗುರುಗಣಪತಿ ಯಕ್ಷಗಾನ ಮಂಡಳಿ ಧರ್ಮಾರಣ್ಯ ಸುಳ್ಯ ಇವರಿಂದ ಯಕ್ಷಗಾನ ತಾಳಮದ್ದಲೆ ಶ್ರೀ ಕೃಷ್ಣ ರಾಯಭಾರ ನಡೆಯಲಿದೆ.
ಮಧ್ಯಾಹ್ನ ಗಂಟೆ 1.00 ಕ್ಕೆ ಮಹಾಪೂಜೆ ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಲಿದೆ.
ಗಂಟೆ 2.30 ರಿಂದ ಶ್ರೀ ಶಾರದಾ ದೇವಿಯ ವೈಭವದ ಶೋಭಾಯಾತ್ರೆ ಐವರ್ನಾಡಿನ ಮುಖ್ಯ ರಸ್ತೆಯಲ್ಲಿ ಸಾಗಿ ಬಾಂಜಿಕೋಡಿ ಹೊಳೆಯಲ್ಲಿ ಜಲಸ್ತಂಭನ ಮಾಡಲಾಗುವುದು.