ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ ೫ ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ 25000 ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ.100000 ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು 2023-24ನೇ ಸಾಲಿನಲ್ಲಿ ನೀಡಿ ಗೌರವಿಸಲಾಗುವುದು.
ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಸ್ತ್ರೀಶಕ್ತಿ ಭವನ, ೨ನೇ ಮಹಡಿ ಮೆಸ್ಕಾಂ ಬಳಿ, ಬಿಜೈ-ಮಂಗಳೂರು-575004 ದೂರವಾಣಿ ಸಂಖ್ಯೆ:0824-2451254 ಇವರಿಂದ ಪಡೆದು ಭರ್ತಿ ಮಾಡಿ ಅ.25 ರೊಳಗೆ ಕಛೇರಿಗೆ ನೀಡಬೇಕು. ಹೆಚ್ಚಿನ ಮಾಹಿತಿ ಮತ್ತು ಅರ್ಜಿ ನಮೂನೆಗಳಿಗಾಗಿ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಸುಳ್ಯದ ಸಿಡಿಪಿಒ ತಿಳಿಸಿದ್ದಾರೆ.