ಅಲೆಕ್ಕಾಡಿ ಮಸೀದಿ ಅಧ್ಯಕ್ಷ ಅಬ್ದುಲ್ ರಹ್ಮಾನ್ ಹಾಜಿ ನಿಧನ

0

ಅಲೆಕ್ಕಾಡಿ ಮಸೀದಿಯ ಅಧ್ಯಕ್ಷ ಅಬ್ದುಲ್ ರಹಿಮಾನ್ ಹಾಜಿ ವಿಧಿವಶ
ಮುರುಳ್ಯ ಗ್ರಾಮದ ಅಲೆಕ್ಕಾಡಿ ಗೌಸಿಯಾ ಜುಮ್ಮಾ ಮಸೀದಿ ಅಧ್ಯಕ್ಷ ಅಬ್ದುಲ್ ರಹಿಮಾನ್ ಹಾಜಿ ( ಅಂದುಮಾನ್ ) ರವರು ಇಂದು ನಿಧನರಾದರು. ಅವರಿಗೆ ಸುಮಾರು 70 ವರ್ಷ ವಯಸ್ಸಾಗಿತ್ತು.
ಹಿಂದೆ ಪಂಜದಲ್ಲಿ ಅಡಿಕೆ ವ್ಯಾಪಾರಿಯಾಗಿದ್ದ ಇವರು ಬಳಿಕ ಬೇರೆ ಬೇರೆ ಕಡೆ ಅಡಿಕೆ ವ್ಯಾಪಾರದಲ್ಲಿ ತೊಡಗಿದ್ದರು. ಸುಮಾರು ಆರು ತಿಂಗಳಿನಿಂದ ಅಸೌಖ್ಯದಿಂದ ಬಳಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೆಲದಿನಗಳಿಂದ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದ ಅವರನ್ನು ನಿನ್ನೆಯಷ್ಟೆ ಆಸ್ಪತ್ರೆಯಿಂದ ಮನೆಗೆ ಕರೆತರಲಾಗಿತ್ತು.
ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.