ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಬಾಳಿಲ-ಮುಪ್ಪೇರ್ಯ ಇದರ ಆಶ್ರಯದಲ್ಲಿ 19ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಅ. 23 ಮತ್ತು 24ರಂದು ಬಾಳಿಲ ವಿದ್ಯಾಬೋಧಿನೀ ಹಿ. ಪ್ರಾ. ಶಾಲಾ ವಠಾರದಲ್ಲಿ ಜರಗಲಿದೆ.
ಅ. 23 ರಂದು ಬೆಳಿಗ್ಗೆ ಶಾರದಾ ದೇವಿಯ ವಿಗ್ರಹ ಆಗಮನ, ಗಣಪತಿ ಹವನ, ಶಾರದಾದೇವಿಯ ಪ್ರತಿಷ್ಠೆ, ಆಭರಣಧಾರಣೆ, ಶಾರದಾದೇವಿಗೆ ಮೂಗುತಿ ಸಮರ್ಪಣೆ ನಡೆಯಿತು. ಬಳಿಕ ನಡೆದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷ ಶೇಷಪ್ಪ ಪರವ ವಹಿಸಿದ್ದರು. ಕಾರ್ಯಕ್ರಮವನ್ನು ಶ್ರೀಮತಿ ನಾಗರತ್ನ ಆರ್.ಭಟ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಬಾಳಿಲ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಪಾವನ ಜೋಗಿಬೆಟ್ಟು, ಸದಸ್ಯ ರಮೇಶ್ ರೈ ಅಗಲ್ಪಾಡಿ, ಕಳಂಜ ಬಾಳಿಲ ಪ್ರಾ.ಕೃಪ.ಸ.ಸಂಘದ ಉಪಾಧ್ಯಕ್ಷ ಕರುಣಾಕರ ಶೆಟ್ಟಿ ಭಾಗವಹಿಸಿದ್ದರು. ಕಾರ್ಯಕ್ರಮ ಉದ್ಘಾಟಿಸಿದ ಸಮಿತಿಯ ಗೌರವಾಧ್ಯಕ್ಷರಾಗಿದ್ದ ರಾಮಚಂದ್ರ ಭಟ್ ಬಾಳಿಲರವರ ಪತ್ನಿ ಶ್ರೀಮತಿ ನಾಗರತ್ನ ಆರ್ ಭಟ್ ರನ್ನು ಈ ಸಂದರ್ಭದಲ್ಲಿ ವಿಶೇಷವಾಗಿ ಗೌರವಿಸಲಾಯಿತು. ಯಶೋಧ ಪೊಸೋಡು ಪ್ರಾರ್ಥಿಸಿದರು ವೇದಿಕೆಯಲ್ಲಿ ಉಪಸ್ಥಿತರಿದ್ದ ಮಹಿಳಾ ಸಮಿತಿ ಅಧ್ಯಕ್ಷೆ ಶ್ರೀಮತಿ ಕಮಲ ಎಂ ಸ್ವಾಗತಿಸಿ, ಸದಸ್ಯೆ ಶ್ರೀಮತಿ ಪುಷ್ಪಾವತಿ ಬಾಳಿಲ ವಂದಿಸಿದರು. ಉತ್ಸವ ಸಮಿತಿ ಕಾರ್ಯದರ್ಶಿ ಶ್ರೀಮತಿ ಜಾಹ್ನವಿ ಕಾಂಚೋಡು ಕಾರ್ಯಕ್ರಮ ನಿರೂಪಿಸಿದರು. ಬಳಿಕ ಬಾಬು ಅಜಿಲ ಬಾಳಿಲ ಮತ್ತು ತಂಡದಿಂದ ಭಜನಾ ಕಾರ್ಯಕ್ರಮ, ಸಾರ್ವಜನಿಕ ಮಹಿಳೆಯರಿಗೆ ಲಲಿತ ಸಹಸ್ರನಾಮ ಪಾರಾಯಣ, ಕುಂಕುಮಾರ್ಚನೆ ನಡೆಯಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ 7.15ರಿಂದ ಸೇವಾ ಗೌರವ ಮತ್ತು ಪ್ರತಿಭಾ ಪುರಸ್ಕಾರ ನಡೆಯಲಿದೆ. ಬಳಿಕ ದೇವದಾಸ್ ಕಾಫಿಕಾಡ್ ರವರ ಚಾ ಪರ್ಕ ಕಲಾವಿದರಿಂದ ಪುದರ್ ದೀತಾಂಡ್ ತುಳು ನಾಟಕ ನಡೆಯಲಿದೆ.