ಸ್ನೇಹ ಶಾಲೆಯಲ್ಲಿ ಆಯುಧ ಪೂಜೆ ಮತ್ತು ಶಾರದಾ ಪೂಜಾ ಕಾರ್ಯಕ್ರಮ

0

ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಆಯುಧ ಪೂಜೆ ಹಾಗೂ ಶಾರದಾ ಪೂಜಾ ಕಾರ್ಯಕ್ರಮಗಳು ಅ.23 ರಂದು ಜರಗಿದುವು. ಸೂರ್ಯಾಲಯದ ಪೂಜೆಯ ಬಳಿಕ ಶಾಲಾ ವಾಹನಗಳು, ಪೀಠೋಪಕರಣಗಳ ತಯಾರಿಕೆಯ ಯಂತ್ರಗಳು, ಕಂಪ್ಯೂಟರ್ ಹಾಗೂ ಲ್ಯಾಬ್ ಗಳಿಗೆ ಪೂಜೆಯು ಜರಗಿತು. ಡಾ. ದಾಮ್ಲೆಯವರೇ ಪೂಜಾ ಕಾರ್ಯಗಳನ್ನು ನೆರವೇರಿಸಿದರು. ಶಾರದಾ ಪೂಜೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ಭಜನೆಗಳನ್ನು ಹಾಡಿ ದೇವರನ್ನು ಸ್ತುತಿಸಿದರು. ಮಂಗಳಾರತಿಯ ಬಳಿಕ ಪ್ರಸಾದ ವಿತರಣೆ ಮಾಡಲಾಯಿತು.

ತದನಂತರ ಪೋಷಕರ ಸಭೆಯು ಜರಗಿತು. ಈ ಸಂದರ್ಭದಲ್ಲಿ ಶಾಲಾ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆಯವರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.
ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.