ಅ. 27: ಬೆಳ್ಳಾರೆ ಗೌರಿಪುರಂ ರಾಜರಾಜೇಶ್ವರಿ ದೇವಸ್ಥಾನ ನಿರ್ಮಾಣಕ್ಕೆ ಶಿಲಾನ್ಯಾಸ, ಪೂರ್ವಭಾವಿ ಸಭೆ

0

ಬೆಳ್ಳಾರೆಯ ಗೌರಿಪುರಂನಲ್ಲಿ ನಿರ್ಮಾಣವಾಗಲಿರುವ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಅ. 27ರಂದು ನಡೆಯಲಿದ್ದು, ಈ ಬಗ್ಗೆ ಪೂರ್ವಭಾವಿ ಸಭೆ ಅ. 25ರಂದು ಗೌರಿಪುರಂನಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ನಾಯಕ್ ಪಂಜಿಗಾರು, ಪೊಸವಳಿಗೆಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಹಾಸ ಮಣಿಯಾಣಿ ಪಡ್ಪು ಸ್ವಾಗತಿಸಿದರು.

ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಆರ್.ಕೆ‌. ಭಟ್ ಕುರುಂಬುಡೇಲು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎರಡೂ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಸಭೆಯಲ್ಲಿ ಪಾಲ್ಗೊಂಡು ಸಲಹೆ ಸೂಚನೆಗಳನ್ನು ನೀಡಿದರು.