ಸಮನ್ಯು ಎಸ್.ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆ

0

ಶಾಲಾ ಶಿಕ್ಷಣ ಇಲಾಖೆ ಹಾಗೂ ರೋಟರಿ ವಿದ್ಯಾ ಸಂಸ್ಥೆ ಮೂಡಬಿದ್ರೆ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಸಮನ್ಯು ಎಸ್ ಶೆಟ್ಟಿ ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಬೀರಮಂಗಲದ ನಿವಾಸಿಯಾಗಿರುವ ಸುದರ್ಶನ ಕೃಷಿ ಏಜೆನ್ಸಿಸ್ ಮಾಲಕರಾದ ಸುದೀಶ್ ಕುಮಾರ್ ಶೆಟ್ಟಿ ಹಾಗೂ ಅಕ್ಷತಾ ಎಸ್ ಶೆಟ್ಟಿ ಇವರ ಪುತ್ರ. ದೈಹಿಕ ಶಿಕ್ಷಣ ಶಿಕ್ಷಕರುಗಳಾದ ಕೊರಗಪ್ಪ ಬೆಳ್ಳಾರೆ ಹಾಗೂ ಪುಷ್ಪವೇಣಿ ತರಬೇತಿ ನೀಡಿದ್ದರು.