ಸುಳ್ಯ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ

0

ಶ್ರೀ ಶಾರದಾ ಮಹಿಳಾ ಪದವಿಪೂರ್ವ ಕಾಲೇಜು ಸುಳ್ಯ ಇಲ್ಲಿ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ. ಕೆ .ಇವರು ಕನ್ನಡದ ಧ್ವಜಾರೋಹಣ ವನ್ನು ನೆರವೇರಿಸಿ, ಕನ್ನಡ ತಾಯಿ ಭುವನೇಶ್ವರಿ ದೇವಿಗೆ ಪುಷ್ಪ ನಮನವನ್ನು ಸಲ್ಲಿಸಿ, ರಾಜ್ಯೋತ್ಸವದ ಮಹತ್ವವನ್ನು ವಿದ್ಯಾರ್ಥಿನಿಯರಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಕನ್ನಡ ನಾಡು ನುಡಿಯ ಬಗ್ಗೆ ಐದು ಹಾಡುಗಳನ್ನು ವಿದ್ಯಾರ್ಥಿನಿಯರಿಂದ ಹಾಡಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಎಲ್ಲಾ ಬೋಧಕ, ಬೋಧಕೇತರ ಮತ್ತು ವಿದ್ಯಾರ್ಥಿನಿ ವೃಂದದವರು ಭಾಗವಹಿಸಿದರು.