ಸಾಹಿತಿಗಳಾದ ವೆಂಕಟ್ರಾಮ ಭಟ್, ಶ್ರೀಮತಿ ಲೀಲಾ ದಾಮೋದರರಿಗೆ ಸನ್ಮಾನ
ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿ ಇದರ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆಯಿತು.
ಸುಳ್ಯ ತಹಶೀಲ್ದಾರ್ ಮಂಜುನಾಥ್ ಎಂ ಧ್ವಜಾರೋಹಣಗೈದು, ಪಥ ಸಂಚಲನ ಗೌರವ ವಂದನೆ ಸ್ವೀಕರಿಸಿದರು.
ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಿದ್ದರು.
ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಸುಳ್ಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲು ವಿಶೇಷ ಆಹ್ವಾನಿತರಾಗಿದ್ದರು.
ಸುಳ್ಯ ನಗರ ಪಂಚಾಯತ್ ಸದಸ್ಯರುಗಳಾದ ವಿನಯ ಕುಮಾರ್ ಕಂದಡ್ಕ, ಎಂ.ವೆಂಕಪ್ಪ ಗೌಡ, ಬುದ್ದನಾಯ್ಕ, ಬಾಲಕೃಷ್ಣ ಭಟ್ ಕೊಡೆಂಕಿರಿ, ಸುಧಾಕರ ಕುರುಂಜಿಭಾಗ್, ಶಶಿಕಲಾ ನೀರಬಿದಿರೆ, ಪೂಜಿತಾ ಕೆ.ಯು., ಸುಶೀಲ ಜಿನ್ನಪ್ಪ, ಡೇವಿಡ್ ಧೀರ ಕ್ರಾಸ್ತ, ಸುಳ್ಯ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ತೀರ್ಥರಾಮ ಹೊಸೊಳಿಕೆ, ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಮೋಹನ್ ಬೊಮ್ಮೆಟ್ಟಿ, ಉಪಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ, ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್ ಎಂ.ಹೆಚ್. ವೇದಿಕೆಯಲ್ಲಿ ಇದ್ದರು.
ಸನ್ಮಾನ : ಸಮಾರಂಭದಲ್ಲಿ ಸಾಹಿತಿಗಳಾದ ವೆಂಕಟ್ರಾಮ್ ಭಟ್ ಹಾಗೂ ಶ್ರೀಮತಿ ಲೀಲಾ ದಾಮೋದರರನ್ನು ಸನ್ಮಾನಿಸಲಾಯಿತು. ಎಸ್.ಎಸ್.ಎಲ್.ಸಿ. ಯಲ್ಲಿ ಕನ್ನಡ ವಿಷಯದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
9.40 ಕ್ಕೆ ಧ್ವಜಾರೋಹಣ : ಕನ್ನಡ ರಾಜ್ಯೋತ್ಸವದಲ್ಲಿ ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ಆಗಬೇಕಿತ್ತು. ಅದಕ್ಕಾಗಿ 8.55 ಕ್ಕೆ ಮೈದಾನದಲ್ಲಿ ಪೋಲೀಸ್, ಗೃಹರಕ್ಷಕ, ಎನ್.ಸಿ.ಸಿ., ಸಹಿತ ಶಾಲಾ -ಕಾಲೇಜು ವಿದ್ಯಾರ್ಥಿಗಳು ಸೇರಿದ್ದರು. ಅತಿಥಿಗಳೂ ಬಂದಿದ್ದರು. ಆದರೆ ಶಾಸಕಿ ಭಾಗೀರಥಿ ಮುರುಳ್ಯರು 9.35 ಕ್ಕೆ ಆಗಮಿಸಿದರು. ಬಳಿಕ 9.40 ಕ್ಕೆ ಧ್ವಜಾರೋಹಣ ನಡೆದು, ಸಭಾ ಕಾರ್ಯಕ್ರಮ ಆರಂಭಗೊಂಡಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಈ.ರಮೇಶ್ ಸ್ವಾಗತಿಸಿದರು. ಶಿಕ್ಷಣ ಸಂಯೋಜಕಿ ಸಂಧ್ಯಾಕುಮಾರಿ, ಸಿ.ಆರ್.ಪಿ. ಮಮತಾ ಸನ್ಮಾನಿತರನ್ನು ಪರಿಚಯಿಸಿದರು. ಶಿಕ್ಷಣ ಸಂಯೋಜಕಿ ನಳಿನಿ ಕನ್ನಡ ಮಾಧ್ಯಮ ದಲ್ಲಿ ಸಾಧನೆಗೈದ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು.
ಶಿಕ್ಷಕಿ ಶ್ರೀಮತಿ ಚಂದ್ರಮತಿ ಕಾರ್ಯಕ್ರಮ ನಿರೂಪಿಸಿದರು. ಕ್ಷೇತ್ರ ಸಮನ್ವಯಾಧಿಕಾರಿ ಶೀತಲ್ ಯು.ಕೆ. ವಂದಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ಮೈದಾನದಲ್ಲಿ ನಡೆಯಿತು.