ಸುಳ್ಯತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಾಹಿತ್ಯ ಸಂಭ್ರಮ -2023 ಉದ್ಘಾಟನೆ

0

ಕನ್ನಡದ ಓಟ ಆಕರ್ಷಕ ಮೆರವಣಿಗೆ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹೆಸರಾಯಿತು ಕರ್ನಾಟಕ- ಉಸಿರಾಗಲಿ ಕನ್ನಡ ಸಂಭ್ರಮಾಚರಣೆ ಹಾಗೂ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ ಸಂಭ್ರಮ ಇದರ ಉದ್ಘಾಟನೆ ಇಂದು ಸರಕಾರಿ ಪ್ರೌಢಶಾಲೆ ಅಜ್ಜಾವರದಲ್ಲಿ ನಡೆಯಿತು.


ಅಜ್ಜಾವರ ಸ.ಪ್ರೌಢಶಾಲೆ, ಪ್ರತಾಪ ಯುವಕ ಮಂಡಲ, ಚೈತ್ರ ಯುವತಿ ಮಂಡಲ ಇದರ ಸಹಯೋಗದಲ್ಲಿ ನಡೆದ ಕಾರ್ಯಕ್ರಮದ ಉದ್ಘಾಟನೆಯನ್ನು ಅಜ್ಜಾವರ ಮಹಿಷಮರ್ದಿನಿ ದೇವಸ್ಥಾನದ ಧರ್ಮದರ್ಶಿ ಭಾಸ್ಕರ ರಾವ್ ಬಯಂಬು ನೆರವೇರಿಸಿದರು. ದ.ರಾ. ಬೇಂದ್ರೆ ನೆನಪು ಹಾಗೂ ಗಾಯನವನ್ನು ಭಾವನಾ ಸುಗಮ ಸಂಗೀತ ಬಳಗದ ಅಧ್ಯಕ್ಷ ಕೆ.ಆರ್. ಗೋಪಾಲಕೃಷ್ಣ ಮಾಡಿದರು.

ಅಧ್ಯಕ್ಷತೆಯನ್ನು ಕ.ಸಾ.ಪ. ಸುಳ್ಯ ಘಟಕದ ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿದ್ದರು. ಬಹುಮಾನ ವಿತರಣೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಜಯರಾಮ ಬಿ.ಎಸ್. ನೆರವೇರಿಸಿದರು. ಶಾಲಾ ಮುಖ್ಯ ಶಿಕ್ಷಕ ಗೋಪಿನಾಥ್ ಮೆತ್ತಡ್ಕ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚನಿಯ ಕಲ್ತಡ್ಕ, ಪ್ರತಾಪ ಯುವಕ ಮಂಡಲದ ಅಧ್ಯಕ್ಷ ಗುರುರಾಜ್ ಅಜ್ಜಾವರ, ಚೈತ್ರ ಯುವತಿ ಮಂಡಲದ ಅಧ್ಯಕ್ಷೆ ಶಶ್ಮಿ ಭಟ್, ಕಸಾಪ ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಲ್ಲತ್ತಡ್ಕ, ಕಸಾಪ ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ, ಕೋಶಾಧಿಕಾರಿ ದಯಾನಂದ ಆಳ್ವ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಲುವಾಗಿ ನಡೆದ ಸ್ಪರ್ಧಾ ಕಾರ್ಯಕ್ರಮಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.


ಮುಖ್ಯ ಶಿಕ್ಷಕ ಗೋಪಿನಾಥ ಮೆತ್ತಡ್ಕ ಸ್ವಾಗತಿಸಿ, ಕಸಾಪ ನಿರ್ದೇಶಕಿ ಸಾವಿತ್ರಿ ಕಣೆಮರಡ್ಕ ವಂದಿಸಿದರು. ಶಿಕ್ಷಕಿ ವಿದ್ಯಾಶಂಕರಿ ಕಾರ್ಯಕ್ರಮ ನಿರೂಪಿಸಿದರು.


ಕನ್ನಡ ಭುವನೇಶ್ವರಿ ಮೆರವಣಿಗೆ:
ಬೆಳಿಗ್ಗೆ ಅಜ್ಜಾವರ ಗ್ರಾಮ ಪಂಚಾಯತ್ ಕಚೇರಿಯಿಂದ ಪ್ರೌಢಶಾಲೆಯವರೆಗೆ ನಡೆದ ಕನ್ನಡ ಭುವನೇಶ್ವರಿ ಮೆರವಣಿಗೆ ಕನ್ನಡದ ಓಟವನ್ನು ಗ್ರಾ.ಪಂ. ಅಧ್ಯಕ್ಷೆ ಬೇಬಿ ಕಲ್ತಡ್ಕ ಉದ್ಘಾಟಿಸಿದರು. ಗ್ರಾ.ಪಂ. ಸದಸ್ಯೆ ಶ್ರೀಮತಿ ಲೀಲಾ ಮನಮೋಹನ್ ಧ್ವಜಾರೋಹಣ ನೆರವೇರಿಸಿದರು. ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಪ್ರವೀಣ್ ಜಯನಗರ ಮತ್ತು ನಿರ್ದೇಶಕರು ಉಪಸ್ಥಿತರಿದ್ದರು. ಮೆರವಣಿಗೆಯಲ್ಲಿ ವಿದ್ಯಾರ್ಥಿಗಳು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಫಲಕಗಳನ್ನು , ಕನ್ನಡ ಧ್ವಜಗಳನ್ನು ಹಿಡಿದು ಸಾಗಿದರು.ಮೆರವಣಿಗೆಯಲ್ಲಿ ನೂರಾರು ಮಂದಿ ಭಾಗವಹಿಸಿದ್ದರು.