ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ಅರಂತೋಡು ಬಳಿ ಇದೀಗ ಸಂಭವಿಸಿದೆ.
ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಅರಂತೋಡು ಪೆಟ್ರೋಲ್ ಪಂಪ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಕಾರು ಜಖಂಗೊಂಡಿದ್ದು, ಕಾರಿನ ಹಿಂಬದಿಯಲ್ಲಿದ್ದ ಸುಳ್ಯ ಮೂಲದ ಪ್ರಯಾಣಿಕರು ಅಪಘಾತವಾದ ಕಾರಿನಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸಿರುವುದಾಗಿ ತಿಳಿದುಬಂದಿದೆ.