ಪಂಜ: ಸುಳ್ಯ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷ, ಮುಖ್ಯ ಕಾರ್ಯನಿರ್ವಹಣಾಧಿಕಾರಿ, ನಿರ್ದೇಶಕರಿಗೆ ತರಬೇತಿ ಶಿಬಿರ

0

ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ನಿಯಮಿತ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್ ಮಂಗಳೂರು, ದ. ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ ಮಂಗಳೂರು, ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಪಂಜ ,ಸಹಕಾರ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ಮುಖ್ಯ ಕಾರ್ಯನಿರ್ವಣಾಧಿಕಾರಿ ಹಾಗೂ ನಿರ್ದೇಶಕರುಗಳಿಗೆ ನಾಯಕತ್ವ ತರಬೇತಿ ಶಿಬಿರ ಅ.31ರಂದು ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಶಾಸಕಿ ಕು.ಭಾಗೀರಥಿ ಮುರುಳ್ಯ ಉದ್ಘಾಟಿಸಿದರು. ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಸಭಾಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ಪೈ ಉಪಸ್ಥಿತರಿದ್ದರು.ಅತಿಥಿ ಉಪನ್ಯಾಸಕರಾಗಿ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಪುತ್ತೂರು ವಿಭಾಗದ ಶ್ರೀಮತಿ ತ್ರಿವೇಣಿ ರಾವ್ ಆಡಳಿತ ಮಂಡಳಿ ಸದಸ್ಯರ ಜವಾಬ್ದಾರಿ ಕರ್ತವ್ಯಗಳ ವಿಷಯದಲ್ಲಿ ಉಪನ್ಯಾಸ ನೀಡಿದರು. ದ ಕ ಜಿಲ್ಲೆ ಕೇಂದ್ರ ಸಹಕಾರ ಬ್ಯಾಂಕ್ ನ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ ನಾಯರ್ ಸಹಕಾರ ಸಂಘಗಳಿಗೆ ಸಾಂಸ್ಥಿಕ ಆಡಳಿತದ ಬಗ್ಗೆ ಉಪನ್ಯಾಸ ನೀಡಿದರು. ವೇದಿಕೆಯಲ್ಲಿ ಸಹಕಾರ ಯೂನಿಯನ್ ನಿರ್ದೇಶಕಿ ಶ್ರೀಮತಿ ಸಾವಿತ್ರಿ ರೈ, ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಕೆ ರಘುನಾಥ ರೈ, ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇಮಿರಾಜ ಪಲ್ಲೋಡಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶ್ರೀಮತಿ ಜಯಶ್ರೀ ಪ್ರಾರ್ಥಿಸಿದರು. ಶ್ರೀಮತಿ ಸಾವಿತ್ರಿ ರೈ ಸ್ವಾಗತಿಸಿದರು. ಎಸ್ ವಿ ಹಿರೇಮಠ್ ನಿರೂಪಿಸಿದರು ವಂದಿಸಿದರು.