ನ.8ರಂದು‌ ಸುಳ್ಯದಲ್ಲಿ ವಿದ್ಯಾಮಾತ ಅಕಾಡೆಮಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಉದ್ಘಾಟನೆ

0

ನಿವೃತ್ತ ‌ಲೋಕಾಯುಕ್ತ ಸಂತೋಷ್ ‌ಹೆಗ್ಡೆ ಆಗಮನ : ವಿದ್ಯಾರ್ಥಿಗಳೊಂದಿಗೆ ಸಂವಾದ

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತ ಅಕಾಡೆಮಿಯ ಸುಳ್ಯ ಶಾಖೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯ ಉದ್ಘಾಟನೆ ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ ನ.8 ರಂದು‌ ನಡೆಯಲಿದೆ. ಕಾರ್ಯಕ್ರಮಕ್ಕೆ ನಿವೃತ್ತ ಲೋಕಾಯುಕ್ತ ಮುಖ್ಯ ನ್ಯಾಯಾಧೀಶರಾದ ಜಸ್ಟಿಸ್ ಸಂತೋಷ್ ಹೆಗ್ಡೆ ಭಾಗವಹಿಸಲಿದ್ದಾರೆ ಎಂದು ವಿದ್ಯಾಮಾತ ಅಕಾಡೆಮಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಚಂದ್ರಾವತಿ ಬಡ್ಡಡ್ಕ ಹೇಳಿದರು.

ನ.4 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ನಡೆಸಿದ ಅವರು ಸೆ.28 ರಂದು ಸುಳ್ಯದಲ್ಲಿ ಶುಭಾರಂಭಗೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯಲ್ಲಿ ನ.8 ರಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಗಾಗಿ ಪ್ರವೇಶಾತಿಯನ್ನು ಪಡೆದುಕೊಂಡಿರುವ ವಿದ್ಯಾರ್ಥಿಗಳಿಗಾಗಿ ತರಬೇತಿ ಪ್ರಾರಂಭಿಸಲಾಗುತ್ತದೆ. ಪ್ರಥಮ ಬ್ಯಾಚ್ ನ ತರಬೇತಿಯನ್ನು ಸಂತೋಷ್ ಹೆಗ್ಡೆಯವರು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದು ನಮ್ಮ ದೇಶದ ವಿವಿಧ ಸಮಸ್ಯೆಗಳ ಬಗ್ಗೆ ಭ್ರಷ್ಟಾಚಾರದ ಬಗ್ಗೆ ಸಂವಾದ ನಡೆಯುವುದು. ವಿದ್ಯಾರ್ಥಿಗಳ ಜತೆಗೆ ಸಾರ್ವಜನಿಕರು ಕೂಡಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ‌ಕಲ್ಪಿಸಲಾಗಿದೆ. ಕಾರ್ಯಕ್ರಮದಲ್ಲಿ ನಿವೃತ್ತ ಮೇಜರ್ ಡಾ.ಕುಶ್ವಂತ್ ಕೋಳಿಬೈಲು, ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್, ವಿದ್ಯಾಮಾತ ‌ಅಕಾಡೆಮಿಯ ಆಡಳಿತ ನಿರ್ದೇಶಕ ಭಾಗ್ಯೇಶ್ ರೈ ಕೂಡಾ ಭಾಗವಹಿಸಲಿದ್ದಾರೆ ಎಂದವರು ವಿವರ ನೀಡಿದರು.

ವಿದ್ಯಾಮಾತ ಅಕಾಡೆಮಿಯ ಸುಳ್ಯ‌ ಕಚೇರಿ ಆಡಳಿತಾಧಿಕಾರಿ ಚಂದ್ರಕಾಂತ್ ಮಾತನಾಡಿ ಗ್ರಾಮೀಣ ಭಾಗದ ಯುವಜನತೆಗೆ ಸಹಕಾರವಾಗುವ ನಿಟ್ಟಿನಲ್ಲಿ ತರಬೇತಿ ನಡೆಯುತ್ತದೆ. ವ್ಯಕ್ತಿತ್ವ ವಿಕಸನದ ಜತೆಗೆ ಸರಕಾರಿ ಉದ್ಯೋಗ ಪಡೆಯಲು ತರಬೇತಿ ನೀಡಲಾಗುತ್ತದೆ. ನಮ್ಮಲ್ಲಿ ತರಬೇತಿ ಪಡೆದವರಲ್ಲಿ 100 ಕ್ಕೂ ಅಧಿಕ ಮಂದಿ ಸರಕಾರಿ ಉದ್ಯೋಗ ಪಡೆದಿದ್ದಾರೆ ಎಂದವರು ವಿವರಿಸಿದರು.

ವಿದ್ಯಾಮಾತ ಅಕಾಡೆಮಿಯ ತರಬೇತುದಾರರಾದ ಡಾ.ಚೈತ್ರ ಮಾತನಾಡಿ ಸ್ಥಳೀಯ ಸಮಸ್ಯೆಗಳನ್ನು ಅರಿತುಕೊಂಡಿರುವ ಸ್ಥಳೀಯ ಯುವಕರು ಕೂಡಾ ಸರಕಾರಿ ಕೆಲಸಕ್ಕೆ ಸೇರಬೇಕು. ಇದಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಬೇಕಾಗುತದೆ. ಅದಕ್ಕೆ ಬೇಕಾದ ತರಬೇತಿ ನೀಡಲಾಗುತ್ತದೆ ಎಂದವರು ಹೇಳಿದರು.