ಭಜನೆಯಿಂದ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಅಭಿವೃದ್ಧಿ – ಭಾಗೀರಥಿ ಮುರುಳ್ಯ
ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಭಜನೋತ್ಸವ ಕಾರ್ಯಕ್ರಮವು ನ.05 ರಂದು ನಡೆಯಿತು.
ಪ್ರಾತ:ಕಾಲದಿಂದ ಸಂಜೆವರೆಗೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.
ಸಂಜೆ ದೇವಸ್ಥಾನದಲ್ಲಿ ಅಳವಡಿಸಿದ ಸಿ.ಸಿ.ಕ್ಯಾಮರಾವನ್ನು ಮತ್ತು ದಿ.ಶ್ರೀಧರ ಕೊಪ್ಪತ್ತಡ್ಕ ಸ್ಮರಣಾರ್ಥ ಶ್ರೀಮತಿ ಸೀತಮ್ಮ ಮತ್ತು ಮಕ್ಕಳು ದೇವಸ್ಥಾನಕ್ಕೆ ನೀಡಿದ ಕಂಪ್ಯೂಟರ್ ನ್ನು ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಮಡ್ತಿಲ ಅಧ್ಯಕ್ಷತೆ ವಹಿಸಿದ್ದರು.
ಅರ್ಚಕರಿಗೆ ಸನ್ಮಾನ
ದೇವಸ್ಥಾನದ ಪ್ರಧಾನ ಅರ್ಚಕ ಪದ್ಮನಾಭ ಭಟ್ ದಂಪತಿ ಮತ್ತು ವಸಿಷ್ಠ ಭಟ್ ಚೂಂತಾರು ದಂಪತಿಗಳನ್ನು ಶಾಲು ಹೊದಿಸಿ,ಫಲ,ಪುಷ್ಪ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.
ನೂತನ ಶಾಸಕಿ ಭಾಗೀರಥಿ ಮುರುಳ್ಯ ರವರನ್ನು ಸನ್ಮಾನಿ ಸಲಾಯಿತು.ಹರಿಶ್ಚಂದ್ರ ಕೊಪ್ಪತ್ತಡ್ಕ, ಗಣೇಶ್ ಪಿಲಿಕಜೆಯವರನ್ನು ಗೌರವಿಸಲಾಯಿತು.
ವೇದಿಕೆಯಲ್ಲಿ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ, ಬೆಂಗಳೂರಿನ ಉದ್ಯಮಿ ಲಕ್ಷ್ಮೀನಾರಾಯಣ ಕಣಿಪ್ಪಿಲ, ಐವರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಲೀಲಾವತಿ ಕುತ್ಯಾಡಿ, ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರು, ದೇರಾಜೆ ಗೆಳೆಯರ ಬಳಗದ ಅಧ್ಯಕ್ಷ ಅರುಣ್ ಗುತ್ತಿಗಾರುಮೂಲೆ ಉಪಸ್ಥಿತರಿದ್ದು ಮಾತನಾಡಿದರು.
ಮಾಧವ ಭಟ್ ಶೃಂಗೇರಿಯವರು ಸನ್ಮಾನಿತರಿಗೆ ಶುಭಹಾರೈಸಿ ಮಾತನಾಡಿದರು.
ಭಜನೋತ್ಸವ ಸಂಯೋಜಕರಾದ ರಾಮಚಂದ್ರ ಪಲ್ಲತ್ತಡ್ಕ ಸ್ವಾಗತಿಸಿ,ಪ್ರಾಸ್ತಾವಿಕ ಮಾತನಾಡಿದರು.
ವ್ಯ.ಸ.ಸದಸ್ಯೆ ಶ್ರೀಮತಿ ತಾರಾ ಆರ್.ರಾವ್ ವಂದಿಸಿದರು.
ಗಣೇಶ್ ಪಿಲಿಕಜೆ ಕಾರ್ಯಕ್ರಮ ನಿರೂಪಿಸಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ತಿತರಿದ್ದರು.