ಆಲೆಟ್ಟಿ ಬಡ್ಡಡ್ಕ ರಸ್ತೆಯ ಮಧ್ಯೆ ಎಲಿಕ್ಕಳ ಎಂಬಲ್ಲಿ ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ರಸ್ತೆಯ ಮೇಲ್ಭಾಗದ ಗುಡ್ಡದಿಂದ ನೀರಿನೊಂದಿಗೆ ಮಣ್ಣು ಕೊಚ್ಚಿ ಬಂದು ರಸ್ತೆಯ ಮೇಲೆ ತುಂಬಿ ಸಂಪೂರ್ಣ ಕೆಸರುಮಯವಾಗಿದೆ.
ಇದರಿಂದಾಗಿ ದ್ವಿಚಕ್ರ ವಾಹನ ಸವಾರರಿಗೆ ಸಂಚಾರಕ್ಕೆ ಅಡಚಣೆಯುಂಟಾಗಿದೆ. ಬೆಳಗ್ಗೆ ಕೆಲವು ದ್ವಿಚಕ್ರ ವಾಹನ ಸವಾರರು ಸ್ಕಿಡ್ ಆಗಿ ಬಿದ್ದಿರುವ ಘಟನೆಯು ವರದಿಯಾಗಿದೆ.