ನವಂಬರ್ 19 ರಂದು ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹ – 2023 ಕಾರ್ಯಕ್ರಮ

0

ನೆಲ್ಲೂರು ಕೆಮ್ರಾಜೆ ಸೊಸೈಟಿಗೆ ಬೆಳ್ಳಿ ಹಬ್ಬದ ಸಂಭ್ರಮ

ನ.12ರಂದು ಎಲಿಮಲೆ ಪ್ರೌಢಶಾಲೆಯಲ್ಲಿ ಬೆಳ್ಳಿ ಹಬ್ಬದ ಪ್ರಯುಕ್ತ ಕ್ರೀಡಾಕೂಟ – ಪೂರ್ವಭಾವಿ ಸಭೆ

ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಂಡಲ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಮಂಗಳೂರು, ಸುಳ್ಯ ತಾಲೂಕು ಸಹಕಾರಿ ಯೂನಿಯನ್, ಸುಳ್ಯ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಇತರ ಸಹಕಾರ ಸಂಘಗಳ ಸಹಕಾರದೊಂದಿಗೆ ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹ – 2023 ಕಾರ್ಯಕ್ರಮವು ನ.19ರಂದು ಎಲಿಮಲೆಯ ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕೇಪಳಕಜೆ ಗೋಪಾಲಕೃಷ್ಣ ಗೌಡ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಪ್ರಯುಕ್ತ ಧ್ವಜಾರೋಹಣ, ಉದ್ಘಾಟನೆ 2024ರ ಕ್ಯಾಲೆಂಡರ್ ಬಿಡುಗಡೆ, ಬೆಳ್ಳಿ ಹಬ್ಬದ ನೆನಪಿಗಾಗಿ ಸೇವಾ ಬಿಂದು ಮರಣ ಸಾಂತ್ವನಾನಿಧಿ ಲೋಕಾರ್ಪಣೆ, ಸದಾ ಕಾರ್ಯಕ್ರಮಗಳು ನಡೆಯಲಿದೆ. ಹಾಗೂ ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಬೆಳ್ಳಿ ಹಬ್ಬದ ಸಂಭ್ರಮದಲ್ಲಿದ್ದು ಇದರ ಅಂಗವಾಗಿ ನ. 12ರಂದು ಸರಕಾರಿ ಪ್ರೌಢಶಾಲೆ ಎಲಿಮಲೆ ಯಲ್ಲಿ ತಾಲೂಕಿನ ಎಲ್ಲಾ ಸಹಕಾರಿ ಸಂಘಗಳ ಆಡಳಿತ ಮಂಡಳಿ ಸದಸ್ಯರಿಗೆ, ಸಿಬ್ಬಂದಿಗಳಿಗೆ ಮತ್ತು ನವೋದಯ ಸ್ವಸಹಾಯ ಸಂಘದ ಸದಸ್ಯರಿಗೆ ಹಾಗೂ ಗ್ರಾಮದ ಸದಸ್ಯರಿಗೆ ಕ್ರೀಡಾಕೂಟ ನಡೆಯಲಿದೆ ಎಂದು ಸೊಸೈಟಿ ಅಧ್ಯಕ್ಷ ವಿಷ್ಣು ಭಟ್ ಮೂಲೆ ತೋಟ ಹೇಳಿದ್ದಾರೆ.

ಪೂರ್ವಭಾವಿ ಸಭೆ : ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಬೆಳ್ಳಿ ಹಬ್ಬದ ಪ್ರಯುಕ್ತ ನ. 12ರಂದು ಎನಿಮಲೈ ಪ್ರೌಢಶಾಲೆಯಲ್ಲಿ ನಡೆಯುವ ಕ್ರೀಡಾಕೂಟದ ಪ್ರಯುಕ್ತ ಪೂರ್ವವಿ ಸಭೆಯು ನಿನ್ನೆ ಸಹಕರಿ ಸಂಘದ ಅಧ್ಯಕ್ಷ ವಿಷ್ಣು ಭಟ್ ಮೂಲೆ ತೋಟ ಅವರ ಅಧ್ಯಕ್ಷತೆಯಲ್ಲಿ ನೆಲ್ಲೂರು ಕೆಮ್ರಾಜೆ ಸೊಸೈಟಿಯಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಧನಂಜಯ ಕೋಟೆ ಮಲೆ, ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ಸೊಸೈಟಿ ಉಪಾಧ್ಯಕ್ಷ ಜಯಪ್ರಸಾದ್ ಸುಳ್ಳಿ ನಿರ್ದೇಶಕರುಗಳಾದ ಸತ್ಯೇಶ್ ಚಂದ್ರೋಡಿ, ಶುಭಕರ ನಾಯಕ್ ಬೊಳ್ಳಜೆ, ದೇವಿಪ್ರಸಾದ್ ಸುಳ್ಳಿ, ಚಂದ್ರ ದಾಸನಕಜೆ, ನಿವೃತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಗನ್ನಾಥ ಉಬರಡ್ಕ ಹಾಗೂ ಗ್ರಾಮ ಪಂಚಾಯತ್ ಸದಸ್ಯರುಗಳಾದ ವೇಣುಗೋಪಾಲ ತುಂಬೆತಡ್ಕ , ವೇಣುಗೋಪಾಲ ಪುಣುಕುಟ್ಟಿ, ರಾಮಚಂದ್ರ ಪ್ರಭು ಹಾಗೂ ಓಂ ಪ್ರಸಾದ್ ಕಜೆ, ಉದಯ ರವಿ, ಹೇಮಾನಾಥ ಕೊಡ್ತುಗುಳಿ, ರವಿಚಂದ್ರ ಕೊಡಪಾಲ, ಕಿರಣ್ ಗುಡ್ಡೆ ಮನೆ, ನಿವೃತ ಸಿಬ್ಬಂದಿ ಚನಿಯಪ್ಪ ಚೆನ್ನಡ್ಕ, ನವೋದಯ ಪ್ರೇರಕಿ ದೇವಕಿ ಉಪಸ್ಥಿತರಿದ್ದರು. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸಂತೋಷ್ ಸ್ವಾಗತಿಸಿದರು.