ನವೆಂಬರ್ 10 ರಂದು ಬೆಳ್ಳಾರೆಯ ಹಿದಾಯ ಪಬ್ಲಿಕ್ ಸ್ಕೂಲ್ ವಿದ್ಯಾ ಸಂಸ್ಥೆಯಲ್ಲಿ ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನದ ಅಂಗವಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಕಾರ್ಯಕ್ರಮ ನಡೆಸಲಾಯಿತು.
ಬಾಲ್ಯ ವಿವಾಹ ಆಚರಣೆಯಿಂದ ಆಗುವ ಶಿಕ್ಷೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ 2006 ಮತ್ತು ಇದರ ದುಷ್ಪರಿಣಾಮಗಳ ಬಗ್ಗೆ ಶಿಕ್ಷಕಿ ಮಿಸ್ರಿಯಾ ರವರು ಸವಿಸ್ತಾರವಾಗಿ ವಿವರಿಸಿದರು. ಸಭಾಧ್ಯಕ್ಷತೆಯನ್ನು ಮುಖ್ಯ ಶಿಕ್ಷಕಿ ಸುನೈನಾ ಬಿ ಯವರು ವಹಿಸಿ ಬಾಲ್ಯ ವಿವಾಹದ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಿದರು. ಎಲ್ಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಮತ್ತು ವಿದ್ಯಾರ್ಥಿನಿಯರಿಂದ ಬಿತ್ತಿ ಪತ್ರ ಪ್ರದರ್ಶನ ಮಾಡಲಾಯಿತು. ಕಾರ್ಯಕ್ರಮದ ಕೊನೆಯಲ್ಲಿ ಶಿಕ್ಷಕಿ ಕಾಶಿಫ ರವರು ವಂದಿಸಿದರು.