ಬೆಳ್ಳಾರೆ : ಭರದಿಂದ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾಮಗಾರಿ

0

ರಸ್ತೆ ಬದಿ ಗೂಡಂಗಡಿ,ವಿದ್ಯುತ್ ಕಂಬಗಳಿಂದ ಸಮಸ್ಯೆ

ಬೆಳ್ಳಾರೆ ಮುಖ್ಯ ಪೇಟೆಯಲ್ಲಿ ರಸ್ತೆ ಡಾಮರೀಕರಣಕ್ಕಾಗಿ ರಸ್ತೆ ಅಗಲೀಕರಣ ಕೆಲಸ ಭರದಿಂದ ನಡೆಯುತ್ತಿದೆ.
ಜೆಸಿಬಿ ಮೂಲಕ ರಸ್ತೆ ಅಗಲೀಕರಣ ಕೆಲಸ ನಡೆಯುವಾಗ ರಸ್ತೆ ಬದಿಯಲ್ಲಿರುವ ಗೂಡಂಗಡಿಗಳು ಹಾಗೂ ವಿದ್ಯುತ್ ಕಂಬಗಳಿಂದ ಸಮಸ್ಯೆಯಾಗಿರುವುದಾಗಿ ತಿಳಿದು ಬಂದಿದೆ.


ಅಭಿವೃದ್ಧಿಗಾಗಿ ಎರಡು ಕೋಟಿ ಅನುದಾನ ಬಂದರೂ ಸಮರ್ಪಕವಾಗಿ ಕೆಲಸ ನಡೆಯುತ್ತದೋ ಇಲ್ಲವೋ ಎನ್ನುವ ಆತಂಕದಿಂದ ಸಾರ್ವಜನಿಕರು ಮಾತನಾಡಿಕೊಳ್ಳುತ್ತಿರುವುದಾಗಿ ತಿಳಿದು ಬಂದಿದೆ.
ಜನಪ್ರತಿನಿಧಿಗಳು,ಅಧಿಕಾರಿಗಳು ಕೂಡಲೇ ಸ್ಪಂದಿಸಿ ಸಮರ್ಪಕವಾಗಿ ಅಭಿವೃದ್ಧಿ ಕೆಲಸಗಳು ನಡೆಯುವಂತೆ ವ್ಯವಸ್ಥೆ ಕಲ್ಪಿಸಬೇಕೆಂದು ಸಾರ್ವಜನಿಕರು ವಿನಂತಿಸಿದ್ದಾರೆ.