ತಾಲೂಕು ಪಿಗ್ಮಿ ಸಂಗ್ರಾಹಕರ ಸಂಘದ ಮಾಸಿಕ ಸಭೆಯು ಸಂಘದ ಅಧ್ಯಕ್ಷ ಹರಿಶ್ಚಂದ್ರ ಇವರ ಅಧ್ಯಕ್ಷತೆ ಯಲ್ಲಿ ನ.10 ರಂದು ಸಂಘದ ಕಚೇರಿಯಲ್ಲಿ ಜರುಗಿತು.
ಈ ಸಭೆಯಲ್ಲಿ ಸಂಘದ ಅಭಿವೃದ್ಧಿ ಬಗ್ಗೆ ಚರ್ಚಿಸಲಾಯಿತು.
ಮುಂದಿನ ಫೆಬ್ರವರಿ ತಿಂಗಳ ಮಾಸಿಕ ಸಭೆಯನ್ನು ಪುಷ್ಪದರ ಕೆ ಜೆ ಇವರ ನೇತೃತ್ವದಲ್ಲಿ ಅರಂತೋಡು “ಸಿರಿ ಸೌಧ ” ಇದರಲ್ಲಿ ನಡೆಸುವುದೆಂದು ತೀರ್ಮಾನಿಸಲಾಯಿತು.
ಸಭೆಯಲ್ಲಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.