ಆಲೆಟ್ಟಿ ಶಾಲಾ ವಿದ್ಯಾರ್ಥಿಗಳಿಗಾಗಿ ಉಚಿತ ದಂತ ಚಿಕಿತ್ಸಾ ಶಿಬಿರ

0

ರೋಟರಿ ಕ್ಲಬ್ ಸುಳ್ಯ ಸಿಟಿಯ ಸಹಯೋಗದಲ್ಲಿ ಕೆ ವಿ ಜಿ ದಂತ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸಹಕಾರದಿಂದ ನ. 09ರಂದು ಆಲೆಟ್ಟಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗಾಗಿ ಉಚಿತ ದಂತ ಪರೀಕ್ಷೆ ಮತ್ತು ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿತ್ತು. ರೊ| ತೀರ್ಥಕುಮಾರ್ ಕುಂಚಡ್ಕರವರು ದೀಪ ಬೆಳಗಿಸುವುದರ ಮೂಲಕ ಶಿಬಿರವನ್ನು ಉದ್ಘಾಟಿಸಿದರು.

ರೋಟರಿ ಸುಳ್ಯ ಸಿಟಿಯ ಅಧ್ಯಕ್ಷ ರೊ| ಗಿರೀಶ್ ನಾರ್ಕೋಡುರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸರ್ವರನ್ನು ಸ್ವಾಗತಿಸಿದರು. ಕೆ ವಿ ಜಿ ದಂತ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ದಂತ ವೈದ್ಯಾದಿಕಾರಿಗಳಾದ ಡಾ. ಅಮೋಘ ಮತ್ತು ಡಾ. ಕ್ರಿಸ್ಟ ದಂತ ಸಂರಕ್ಷಣೆ ಹಾಗೂ ಶಿಬಿರದ ಬಗ್ಗೆ ಮಾಹಿತಿ ನೀಡಿದರು. ರೋಟರಿ ಸುಳ್ಯ ಸಿಟಿಯ ಕಾರ್ಯದರ್ಶಿ ರೊ| ಚೇತನ್, ಎಸ್ ಡಿ ಎಂ ಸಿ ಸದಸ್ಯ ಸೀತಾರಾಮ ವೇದಿಕೆಯಲ್ಲಿ ಉಪಸ್ಥಿತರಿದ್ದರು, ಮುಖ್ಯ ಶಿಕ್ಷಕಿ ಸುನಂದ ಸರ್ವರಿಗೂ ವಂದಿಸಿದರು. ವಿದ್ಯಾರ್ಥಿಗಳಾದ ಆಶಿಕಾ ಮತ್ತು ಪಾತಿಮಾ ಕಾರ್ಯಕ್ರಮ ನಿರೂಪಿಸಿದರು. ಮುಂದೆ ನಡೆದ ಶಿಬಿರದಲ್ಲಿ ಸುಮಾರು 50ಕ್ಕೂ ಹೆಚ್ಚು ಮಕ್ಕಳಿಗೆ ದಂತ ಪರೀಕ್ಷೆ ಹಾಗೂ ಚಿಕಿತ್ಸೆ ನೀಡಲಾಯಿತು. ಕೆ ವಿ ಜಿ ದಂತ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ವೈದ್ಯಾದಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಮತ್ತು ಶಾಲಾ ಶಿಕ್ಷಕರ ಸಹಕಾರದಿಂದ ಶಿಬಿರ ಯಶಸ್ವಿಯಾಯಿತು.