ವರ್ಗಾವಣೆಗೊಂಡ ಸಂಪಾಜೆ ವಲಯಾರಣ್ಯಾಧಿಕಾರಿ ಮಧುಸೂದನ್ ಅವರಿಗೆ ಸನ್ಮಾನ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ಮಡಿಕೇರಿ ತಾಲೂಕು, ಸಂಪಾಜೆ ವಲಯದ ಯು.ಚೆಂಬು ಮತ್ತು ಎಂ. ಚೆಂಬು ಒಕ್ಕೂಟದ ಪದಗ್ರಹಣ ಕಾರ್ಯಕ್ರಮವು ನ.10ರಂದು ಕೊಡಗು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಬಾಲೆಂಬಿ ಕಛೇರಿಯ ಸಭಾಂಗಣದಲ್ಲಿ ಜರುಗಿತು.
ಚೆಂಬು ಗ್ರಾಮ ಪಂಚಾಯತ್ ಅಧ್ಯಕ್ಷ ತೀರ್ಥರಾಮ ಪೂಜಾರಿಗದ್ದೆ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮವನ್ನು ಪ್ರಗತಿಪರ ಕೃಷಿಕರಾದ ಹೊಸೂರು ಗೋಪಾಲಕೃಷ್ಣ ಅವರು ಉದ್ಘಾಟಿಸಿ, ಶುಭಹಾರೈಸಿದರು.
ಕೊಡಗು ಜಿಲ್ಲಾ ಶ್ರೀ.ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕರಾದ ಲೀಲಾವತಿ ಅವರು ಮಾತನಾಡಿ ಸಂಪೂರ್ಣ ಸುರಕ್ಷಾ ಯೋಜನೆ,ಪ್ರಗತಿ ರಕ್ಷಾ ಕವಚ ಮತ್ತು ಯೋಜನೆಯಿಂದ ದೊರಕುವ ಇತರೆ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ಮುಖ್ಯ ಅತಿಥಿಗಳಾಗಿ ಸಂಪಾಜೆ ಪಯಸ್ವಿನಿ ಸಹಕಾರಿ ಸಂಘದ ನಿರ್ದೇಶಕರಾದ ದಯಾನಂದ ಪನೆಡ್ಕ, ಮಾಧವ ಪೊಯ್ಯ ಮಜಲು, ಸಂಪಾಜೆ ವಲಯ ಅರಣ್ಯಾಧಿಕಾರಿ ಮಧುಸೂಧನ್ ಅವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ,ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಚೆಂಬು ಗ್ರಾಮಕ್ಕೆ ಅಮೂಲ್ಯ ಕೊಡುಗೆ ನೀಡಿ, ಪ್ರಸ್ತುತ ಸಂಪಾಜೆ ಅರಣ್ಯ ವಲಯದಿಂದ ವರ್ಗಾವಣೆಗೊಂಡ ಅರಣ್ಯಾಧಿಕಾರಿ ಮಧುಸೂದನ್ ಅವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಯೋಜನಾಧಿಕಾರಿ ಪುರುಷೋತ್ತಮ್,ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು. ವಲಯ ಮೇಲ್ವಚಾರಕಿ ವಿನೋದರವರು ಸ್ವಾಗತಿಸಿ, ಭವಾನಿ ಮತ್ತು ತಂಡ ಪ್ರಾರ್ಥನೆ ನೆರವೇರಿಸಿದರು.ಯತೀಶ್ ಕೆದಂಬಾಡಿ ವಂದಿಸಿದರು. ರಮೇಶ್ ನಂಬಿಯಾರ್ ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭ ಒಕ್ಕೂಟದ ಪದಾಧಿಕಾರಿಗಳು,ಸದಸ್ಯರು,ಸಾರ್ವಜನಿಕರು ಉಪಸ್ಥಿತರಿದ್ದರು.