ಆಲೆಟ್ಟಿ:ಗುಂಡ್ಯ ಜನನಿ ಫ್ರೆಂಡ್ಸ್ ಕ್ಲಬ್ ಮತ್ತು ಯುವಜನ ಸಂಯುಕ್ತ ಮಂಡಳಿಯ ವತಿಯಿಂದ ಮುಕ್ತ ಕೇರಂ ಪಂದ್ಯಾಟದ ಉದ್ಘಾಟನೆ

0

ಆಲೆಟ್ಟಿಯ ಗುಂಡ್ಯ ಜನನಿ ಫ್ರೆಂಡ್ಸ್ ಕ್ಲಬ್ ಹಾಗೂ ಸುಳ್ಯ ಯುವಜನ ಸಂಯುಕ್ತ ಮಂಡಳಿ ಇದರ ಜಂಟಿ ಆಶ್ರಯದಲ್ಲಿ ಮುಕ್ತ ಡಬಲ್ಸ್ ಮತ್ತು ಸಿಂಗಲ್ಸ್ ಕೇರಂ ಪಂದ್ಯಾಟವು ಆಲೆಟ್ಟಿ ಸಹಕಾರಿ ಸಂಘದ ಆವರಣದಲ್ಲಿ ನ.12 ರಂದು ನಡೆಯಿತು.

ಪಂದ್ಯಾಟದ ಉದ್ಘಾಟನೆಯನ್ನು ಆಲೆಟ್ಟಿ ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಶ್ರೀಮತಿ ವೀಣಾವಸಂತ ರವರು ದೀಪ ಪ್ರಜ್ವಲಿಸಿ ನೆರವೇರಿಸಿದರು.
ಜನನಿ ಕ್ಲಬ್ ಅಧ್ಯಕ್ಷ ತೀರ್ಥಕುಮಾರ್ ವಾಲ್ತಾಜೆ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಆಲೆಟ್ಟಿ ಪಂಚಾಯತ್ ಸದಸ್ಯರಾದ
ಸತ್ಯ ಕುಮಾರ್ ಆಡಿಂಜ, ಶಿವಾನಂದ ರಂಗತ್ತಮಲೆ, ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷ ಪ್ರವೀಣ್ ಕುಮಾರ್ ಎ‌.ಎಂ, ಆಲೆಟ್ಟಿ ಸಹಕಾರಿ ಸಂಘದ ಉಪಾಧ್ಯಕ್ಷ ಸುಧಾಕರ ಆಲೆಟ್ಟಿ, ಸದಾಶಿವ ದೇವಸ್ಥಾನದ ಸೇವಾ ಸಮಿತಿ ಕಾರ್ಯದರ್ಶಿ ರಾಮಚಂದ್ರ ಆಲೆಟ್ಟಿ, ಭಜನಾ ಸಂಘದ ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ, ಉಪಾಧ್ಯಕ್ಷ ಯೋಗೀಶ ರಾಮ ಗುಂಡ್ಯ, ಕ್ಲಬ್ ಗೌರವಾಧ್ಯಕ್ಷ ಮಾಧವ ನಾಯ್ಕ್ ಎಲಿಕ್ಕಳ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ದಿಲೀಪ್ ಗುಂಡ್ಯ ಪ್ರಾರ್ಥಿಸಿದರು. ಸುರೇಶ್ ಆಲೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ನಾಗರಾಜ್ ಬಡ್ಡಡ್ಕ ವಂದಿಸಿದರು. ಗೌರವಾಧ್ಯಕ್ಷ ಲತೀಶ್ ಗುಂಡ್ಯ ಕಾರ್ಯಕ್ರಮ ನಿರೂಪಿಸಿದರು.