ಬಣ್ಣದ ಲೋಕದಲ್ಲಿ ವಿಹರಿಸಿದ ಚಿಣ್ಣರು: ರೋಟರಿ ಶಾಲಾ ಆವರಣದಲ್ಲಿ ಹಬ್ಬದ ವಾತಾವರಣ
ಕ್ರಿಯೇಟಿವ್ ಸ್ಕೂಲ್ ಆಫ್ ಆರ್ಟ್ಸ್ ಸುಳ್ಯ, ರೋಟರಿ ಕ್ಲಬ್ ಸುಳ್ಯ, ಇಂಟರ್‍ಯಾಕ್ಟ್ ಕ್ಲಬ್ ರೋಟರಿ ಶಾಲೆ ಮಿತ್ತಡ್ಕ, ಸುಳ್ಯ ಮತ್ತು ಸುದ್ದಿ ಬಿಡುಗಡೆ ಪತ್ರಿಕೆ, ಸುದ್ದಿ ವೆಬ್‌ಸೈಟ್ ಹಾಗೂ ಸುದ್ದಿ ಚಾನೆಲ್ ಸಹಯೋಗದೊಂದಿಗೆ ಮಕ್ಕಳ ದಿನಾಚರಣೆಯ ಪ್ರಯುಕ್ತ ಸುಳ್ಯ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ ವರ್ಣ ಚಿತ್ತಾರ-2023 ಸ್ಪರ್ಧೆಯು ಇಂದು ರೋಟರಿ ಪ್ರಾಥಮಿಕ ಶಾಲಾ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ಆನಂದ ಖಂಡಿಗ ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ. ಯು.ಪಿ.ಶಿವಾನಂದರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುಳ್ಯ ರೋಟರಿ ವಿದ್ಯಾಸಂಸ್ಥೆಯ ಸಂಚಾಲಕ ಗಿರಿಜಾಶಂಕರ್ ತುದಿಯಡ್ಕ, ಇಂಟರ್‍ಯಾಕ್ಟ್ ಕ್ಲಬ್ಸ್ ಇದರ ಸಭಾಪತಿ ದಯಾನಂದ ಆಳ್ವ, ಸುಳ್ಯ ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾಕುಮಾರ್ ನಾಯರ್ ಕೆರೆ, ಸುದ್ದಿ ಬಿಡುಗಡೆ ಕಚೇರಿ ವ್ಯವಸ್ಥಾಪಕ ಯಶ್ವಿತ್ ಕಾಳಂಮನೆ ಉಪಸ್ಥಿತರಿದ್ದರು.
ರೋಟರಿ ಹೈಸ್ಕೂಲ್‌ನ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವೀಣಾ ಶೇಡಿಕಜೆ, ಇಂಟರ್‍ಯಾಕ್ಟ್ ಕ್ಲಬ್‌ನ ಕಾರ್ಯದರ್ಶಿ ಶೈನ್ ಯ ಪಾರೆ ಉಪಸ್ಥಿತರಿದ್ದರು.
ಕ್ರಿಯೇಟಿವ್ ಸ್ಕೂಲ್ ಆಫ್ ಆರ್ಟ್ಸ್ ನ ನಿರ್ದೇಶಕರುಗಳಾದ ಶ್ರೀಹರಿ ಪೈಂದೋಡಿ ಸ್ವಾಗತಿಸಿ, ಪ್ರಸನ್ನ ಐವರ್ನಾಡು ವಂದಿಸಿದರು.
ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ 600 ಕ್ಕೂ ಹೆಚ್ಚು ಮಕ್ಕಳು ಸ್ಪರ್ದೆಯಲ್ಲಿ ಪಾಲ್ಗೊಂಡರು.
ಶಿಕ್ಷಕಿ ನಳಿನಾಕ್ಷಿ ಕಲ್ಲಡ್ಕ ಮತ್ತು ಕು. ಪ್ರಣಮ್ಯ ಆಳ್ವ ಕಾರ್ಯಕ್ರಮ ನಿರೂಪಿಸಿದರು.