ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ನೂತನ ಶಾಖೆಯು ಸಂಪಾಜೆ ಪಯಸ್ವಿನಿ ಸಹಕಾರಿ ಬ್ಯಾಂಕ್ ಕಟ್ಟಡದಲ್ಲಿ ನ.15ರಂದು ಶುಭಾರಂಭಗೊಳ್ಳಲಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಸಹಕಾರ ಕೇಂದ್ರದ ಅಧ್ಯಕ್ಷರಾದ ಕೊಡಂದೇರ ಪಿ ಗಣಪತಿಯವರು ವಹಿಸಲಿದ್ದಾರೆ. ಇದರ ಉದ್ಘಾಟನೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರು, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಎ.ಎಸ್.ಪೊನ್ನಣ್ಣ ನವರು ನೆರವೇರಿಸಲಿದ್ದಾರೆ. ಭದ್ರತಾ ಕೊಠಡಿಯ ಉದ್ಘಾಟನೆಯನ್ನು ಸದಸ್ಯರು ಕರ್ನಾಟಕ ವಿಧಾನಪರಿಷತ್‌ನ ಎಂ.ಪಿ.ಸುಜಾ ಕುಶಾಲಪ್ಪ, ನಗದು ಕೌಂಟರ್ ಉದ್ಘಾಟನೆಯನ್ನು ವಿರಾಜಪೇಟೆ ಮಾಜಿ ಶಾಸಕರು ಕೆ.ಜಿ.ಬೋಪಯ್ಯ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಸಹಕಾರ ಕೇಂದ್ರದ ಬ್ಯಾಂಕ್‌ನ ಉಪಾಧ್ಯಕ್ಷರಾದ ಕೇಟೋಳಿರ ಎಸ್.ಹರೀಶ್ ಪೂವಯ್ಯ, ಪಯಸ್ವಿನಿ ಪ್ರಾ.ಕೃ.ಪ.ಸ ಸಂಘದ ಅಧ್ಯಕ್ಷರಾದ ಅನಂತ ಎನ್.ಸಿ, ಪೆರಾಜೆ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ ಯವರು ಭಾಗವಹಿಸಲಿದ್ದಾರೆ.