ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನವಂಬರ್ 11ರಂದು ಮಕ್ಕಳ ದಿನಾಚರಣೆ ಹಾಗೂ ದೀಪಾವಳಿ ಹಬ್ಬದ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮಕ್ಕೆ ಅತಿಥಿಗಳನ್ನು ಶಾಲಾ ವಿದ್ಯಾರ್ಥಿಗಳು ದೀಪಗಳ ಮೂಲಕ ವೇದಿಕೆಗೆ ಬರಮಾಡಿಕೊಂಡರು.
ಶಾಲಾ ಸಂಚಾಲಕರಾದ ರೆ.ಫಾ. ವಿಕ್ಟರ್ ಡಿಸೋಜ ರವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಪ್ರಕಾಶ್ ಮೂಡಿತ್ತಾಯ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಪಂಡಿತ್ ಜವಾಹರ್ ಲಾಲ್ ನೆಹರೂರವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಮಕ್ಕಳ ದಿನಾಚರಣೆ ಮತ್ತು ದೀಪಾವಳಿ ಹಬ್ಬದ ಮಹತ್ವದ ಬಗ್ಗೆ ಅತಿಥಿ ಸ್ಥಾನದಿಂದ ಪ್ರಕಾಶ್ ಮೂಡುತ್ತಾಯರು ವಿದ್ಯಾರ್ಥಿಗಳಿಗೆ ತಿಳಿಸಿದರು. ಶಾಲಾ ಶಿಕ್ಷಕ ವೃಂದದವರು ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆಯ ಶುಭಾಶಯ ಗೀತೆ ಹಾಡಿದರು.
ಸಹ ಶಿಕ್ಷಕಿ ಶ್ರೀಮತಿ ಶೋಭಾ ರವರು ಕಾರ್ಯಕ್ರಮದ ಪ್ರಾಮುಖ್ಯತೆಯ ಬಗ್ಗೆ ವಿವರಿಸಿದರು. ಕಾರ್ಯಕ್ರಮದ ಅಂಗವಾಗಿ ನಡೆಸಿದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಎರಡನೇ ತರಗತಿಯ ವಿದ್ಯಾರ್ಥಿಗಳು ದೀಪಾವಳಿಯ ಶುಭಾಶಯ ಗೀತೆ ಹಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಸಂಚಾಲಕರಾದ ರೆ.ಫಾ. ವಿಕ್ಟರ್ ಡಿಸೋಜರವರು ಅತಿಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಿದರು ಮತ್ತು ಎಲ್ಲಾ ಪುಟಾಣಿ ವಿದ್ಯಾರ್ಥಿಗಳಿಗೂ ಹಾಗೂ ನಾಡಿನ ಸಮಸ್ತ ಜನತೆಗೂ ಮಕ್ಕಳ ದಿನಾಚರಣೆ, ದೀಪಾವಳಿ ಹಬ್ಬದ ಶುಭಾಶಯ ಕೋರಿದರು.
ಶಾಲಾ ಮುಖ್ಯೋಪಾಧ್ಯಾಯರದ ಸಿ. ಬಿನೋಮ, ಪೂರ್ವ ಪ್ರಾಥಮಿಕ ಶಾಲಾ ಪೋಷಕ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಭವ್ಯ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ನಾಲ್ಕನೇ ತರಗತಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಪಟಾಕಿ ಸಿಡಿಸುವುದರ ಮೂಲಕ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಲಾಯಿತು.
ವೇದಿಕೆಯಲ್ಲಿ ಶಾಲಾ ವಿದ್ಯಾರ್ಥಿ ನಾಯಕರುಗಳಾದ ಸಮನ್ಯು ಶೆಟ್ಟಿ, ಫಾತಿಮತ್ ಶಮ್ನ, ಹೈನಾ ತಸ್ಮೀನಾ, ಮೊಹಮ್ಮದ್ ಹಫೀಜ್ ಉಪಸ್ಥಿತರಿದ್ದರು.
ಶಿಕ್ಷಕಿ ಪುಷ್ಪಲತಾ ರವರು ಸ್ವಾಗತಿಸಿ ಶಿಕ್ಷಕ ಶ್ರೀ ಭಾನುಪ್ರಕಾಶ್ರವರು ವಂದನಾರ್ಪಣೆ ಮಾಡಿದರು. ಶಿಕ್ಷಕಿ ಜೂಲಿಯೆಟ್ ಲೋ ಬೋರವರು ಕಾರ್ಯಕ್ರಮವನ್ನು ನಿರೂಪಿಸಿದರು.