ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ಆರಂಭ

0

ಸುಳ್ಯದ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವವು ನ.13ರಿಂದ ಪ್ರಾರಂಭಗೊಂಡಿದ್ದು, ಡಿ‌.12ರವರೆಗೆ ಜರುಗಲಿದೆ.

ಕಾರ್ತಿಕ ಮಾಸದ ಪ್ರಯುಕ್ತ ಕಾರ್ತಿಕ ದೀಪೋತ್ಸವ ಕಾರ್ಯಕ್ರಮವು ಜರುಗಲಿದ್ದು, ಮುಂದಿನ ಒಂದು ತಿಂಗಳ ಕಾಲ ಶ್ರೀ ಮಹಾವಿಷ್ಣುವಿನ ಸನ್ನಿಧಿಯಲ್ಲಿ ಪ್ರತಿದಿನ ಸಂಜೆ ತಾಲೂಕಿನ ವಿವಿಧ ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ ನಡೆಯಲಿದೆ.