ಸೋಣಂಗೇರಿ : ಕಾರು – ಬೈಕ್ ಅಪಘಾತ

0

ಬೈಕ್ ಸವಾರನಿಗೆ ಗಾಯ

ಕಾರು ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸೋಣಂಗೇರಿ ಸಮೀಪ ನ. ೧೪ರಂದು ಸಂಭವಿಸಿದೆ.

ಜಾಲ್ಸೂರು ಗ್ರಾಮದ ಸೋಣಂಗೇರಿ ಅಂಗನವಾಡಿ ಬಳಿ ಚರಣ್ ಎಂಬವರು ಚಲಾಯಿಸುತ್ತಿದ್ದ ಕಾರು ಹಾಗೂ ಸತೀಶ್ ಸರಳಾಯರು ಚಲಾಯಿಸುತ್ತಿದ್ದ ಬೈಕ್‌ ಡಿಕ್ಕಿ ಹೊಡೆಯಿತು. ಪರಿಣಾಮ ಬೈಕ್ ಸವಾರ ರಸ್ತೆಗೆ ಬಿದ್ದು ಗಾಯಗಳಾಗಿದ್ದು, ಗಾಯಾಳುವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಯಿತು. ಎರಡೂ ವಾಹನಗಳು ಜಖಂಗೊಂಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.