ಸುಳ್ಯದ ಪ್ರಸಾದ್ ನೇತ್ರಾಲಯದಲ್ಲಿ ಉಚಿತ ಮಧುಮೇಹ ಕಣ್ಣಿನ ತಪಾಸಣೆ
ಇಂದಿನ ದಿನಗಳಲ್ಲಿ ಮಧುಮೇಹ ಖಾಯಿಲೆಯು ಸಾಮಾನ್ಯವಾಗಿ ಕಂಡು ಬರುತ್ತಿದ್ದು, ಖಾಯಿಲೆಗೆ ಒಳಗಾದವರು ಇದರ ನಿಯಂತ್ರಣಕ್ಕಾಗಿ ನಿರಂತರ ಆಹಾರ ಪಥ್ಯ, ವ್ಯಾಯಾಮ, ಔಷಧೋಪಚಾರಗಳನ್ನು ನಡೆಸಿಕೊಂಡು ಬರಬೇಕಾಗುತ್ತದೆ. ಮಧುಮೇಹದಿಂದ ದೇಹದ ಮೇಲಾಗುವ ದುಷ್ಪರಿಣಾಮಗಳಲ್ಲಿ ಪ್ರಮುಖವಾದದ್ದು ಕಣ್ಣಿನ ನರಗಳ ಮೇಲಾಗುವ ಪ್ರಭಾವ, ಸರಿಯಾದ ಸಮಯಕ್ಕೆ ಈ ತೊಂದರೆಗಳ ಬಗ್ಗೆ ತಪಾಸಣೆ ಮತ್ತು ಚಿಕಿತ್ಸೆಯನ್ನು ಪಡೆದುಕೊಳ್ಳದಿದ್ದರೆ ಕಣ್ಣಿನ ದೃಷ್ಟಿಯನ್ನು ಸಂಪೂರ್ಣ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ. ಮಧುಮೇಹ ಖಾಯಿಲೆ ಇದ್ದವರು ಪ್ರತೀ 6 ತಿಂಗಳಿಗೊಮ್ಮೆ ತಮ್ಮ ಕಣ್ಣುಗಳ ಪರೀಕ್ಷೆ ಮಾಡಿಸಿಕೊಳ್ಳುವುದು ಅತೀ ಅವಶ್ಯಕವಾಗಿರುತ್ತದೆ.
ಸುಳ್ಯ ಕಣ್ಣಿನ ಆಸ್ಪತ್ರೆ ಪ್ರಸಾದ್ ನೇತ್ರಾಲಯದಲ್ಲಿ ನಾಳೆ ನ.17 ರಂದು ವಿಶ್ವ ಮಧುಮೇಹ ದಿನಾಚರಣೆಯ ಪ್ರಯುಕ್ತ ಉಚಿತ ಮಧುಮೇಹ ಕಣ್ಣಿನ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಬೆಳಿಗ್ಗೆ 9.00ಕ್ಕೆ ಪ್ರಾರಂಭವಾಗುವ ಶಿಬಿರವು ಮಧ್ಯಾಹ್ನ 01.00 ರವರೆಗೆ ನಡೆಯಲಿದ್ದು, ಶಿಬಿರದಲ್ಲಿ ಉಚಿತ ತಪಾಸಣೆ ಇರುತ್ತದೆ. ಹೆಚ್ಚಿನ ತಪಾಸಣೆ ಅಗತ್ಯ ಕಂಡುಬರುವ ಶಿಬಿರಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ತಪಾಸಣೆ ನಡೆಸಲಾಗುವುದು ಮತ್ತು ಚಿಕಿತ್ಸೆಯನ್ನು ರಿಯಾಯಿತಿ ದರದಲ್ಲಿ ನಡೆಸಲಾಗುವುದು. ಸಾರ್ವಜನಿಕರು ಅಪಾಯಿಂಟ್‌ಮೆಂಟ್‌ಗಾಗಿ 08257-231956, 8748938629 ನಂಬರನ್ನು ಸಂಪರ್ಕಿಸಬೇಕು ಎಂದು (ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, 1ನೇ ಮಹಡಿ, ಜನತ ಕಾಂಪ್ಲೆಕ್ಸ್, ಗಾಂಧಿನಗರ, ಸುಳ್ಯ) ಆಸ್ಪತ್ರೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.