ಗುತ್ತಿಗಾರು ಕಾಲೇಜಿನ ಯಾಸಿಕ ಯಂ.ಆರ್. ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

0


ಶಾಲಾ ಶಿಕ್ಷಣ ಇಲಾಖೆ( ಪದವಿ ಪೂರ್ವ) ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಗಣಪತಿ ಪದವಿ ಪೂರ್ವ ಕಾಲೇಜು ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳ ಕ್ರೀಡಾಂಗಣ ಮಂಗಳೂರು ಇಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಸುಳ್ಯ ತಾಲೂಕನ್ನು ಪ್ರತಿನಿಧಿಸಿದ್ದ ಸರಕಾರಿ ಪದವಿಪೂರ್ವ ಕಾಲೇಜು ಗುತ್ತಿಗಾರು ಇದರ ಯಾಸಿಕ ಯಂ.ಆರ್ ಇವರು 15೦೦ ಮತ್ತು 3೦೦೦ ಮೀ. ಓಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಹಾಗೂ ಲಾಂಗ್ ಜಂಪ್ ವಿಭಾಗದಲ್ಲಿ ಯುಕ್ತಿ ಕೆ. ಇವರು ಭಾಗವಹಿಸಿ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.