ಚೊಕ್ಕಾಡಿ ಭಗವಾನ್ ಸತ್ಯಸಾಯಿ ವಿದ್ಯಾ ಕೇಂದ್ರ ದಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ

0

ಚೊಕ್ಕಾಡಿ ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾ ಕೇಂದ್ರ ದಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯು ನ.15 ರಂದು ನಡೆಯಿತು.

ದ.ಕ.ಜಿ.ಪಂ. ಶಾಲಾ ‌ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಾಣಾಧಿಕಾರಿ ಕಚೇರಿ ಸುಳ್ಯ,ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾ ಕೇಂದ್ರ ಇದರ ಸಹಭಾಗಿತ್ವದಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ 2023 ನ.15 ರಂದು ನಡೆಯಿತು. ಚೊಕ್ಕಾಡಿ
ಭಗವಾನ್ ಶ್ರೀ ಸತ್ಯಸಾಯಿ ಸೇವಾ ಟ್ರಸ್ಟ್ ಅಧ್ಯಕ್ಷ ಲಕ್ಷ್ಮೀ ನಾರಾಯಣ ಕೋಟೆ ಅಧ್ಯಕ್ಷತೆ ವಹಿಸಿದ್ದರು.
ಅಮರಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಾನಕಿ ಕಂದಡ್ಕ ಉದ್ಘಾಟಿಸಿದರು.
ವೇದಿಕೆಯಲ್ಲಿ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಭುವನೇಶ್ವರಿ ಪದವು, ಪಂ.ಸದಸ್ಯ ಜನಾರ್ದನ ಪೈಲೂರು, ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಶೀತಲ್ ಯು.ಕೆ,ಸತ್ಯಸಾಯಿ ಸೇವಾ ಟ್ರಸ್ಟ್ ಕಾರ್ಯದರ್ಶಿ ಸಾಯಿಪ್ರಸಾದ್ ಅಜ್ಜನಗದ್ದೆ, ಕೋಶಾಧಿಕಾರಿ ಮಹಾಬಲೇಶ್ವರ ಕಾಂಚೋಡು, ಸತ್ಯಸಾಯಿ ವಿದ್ಯಾಕೇಂದ್ರ ಮುಖ್ಯ ಶಿಕ್ಷಕ ಗುಣಶೇಖರ್ ಭಟ್, ನೌಕರರ ಸಂಘದ ಅಧ್ಯಕ್ಷ ತೀರ್ಥರಾಮ ಹೊಸೊಳಿಕೆ, ಕ.ಸಾ.ಪ ಅಧ್ಯಕ್ಷ ಚಂದ್ರಶೇಖರ ಪೇರಾಲು, ಶಿಕ್ಷಕರ ಸಂಘದ ಕಾರ್ಯದರ್ಶಿ ಗೋಪಿನಾಥ್ ಎಂ, ಪ್ರಾ.ಮು.ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀಧರ ಗೌಡ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ ಕೆ.ಎಸ್ ಉಪಸ್ಥಿತರಿದ್ದರು. ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯು ಎರಡು ದಿನಗಳ ಕಾಲ ನಡೆಯಲಿರುವುದು.