ಕಳಂಜ: ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ ಸಮಾಪ್ತಿ

0

ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘ, ಕಳಂಜ ಗ್ರಾ.ಪಂ., ಯುವಕ ಮಂಡಲ ಕಳಂಜ, ಬಳಕೆದಾರರ ವೇದಿಕೆ ಕಳಂಜ ಮತ್ತು ಕಂಪನಿಯಾ ನೆಮ್ಮದಿ ವೆಲ್ ನೆಸ್ ಸೆಂಟರ್ ಪುತ್ತೂರು ಇವುಗಳ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ ನ. 3 ರಿಂದ ನ. 17 ತನಕ ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಕೋಟೆಮುಂಡುಗಾರಿನ ಪ್ರಧಾನ ಕಚೇರಿಯ ಸಭಾಂಗಣದಲ್ಲಿ ನಡೆಯಿತು.

15 ದಿನಗಳ ನಡೆದ ಶಿಬಿರದಲ್ಲಿ ನೂರಾರು ಜನ ಇದರ ಸದುಪಯೋಗ ಪಡೆದುಕೊಂಡರು. ನ‌.15 ರಂದು ಶಿಬಿರದ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು. ಮಾಹಿತಿ ಕಾರ್ಯಕ್ರಮ ಅಧ್ಯಕ್ಷತೆಯನ್ನು ಸಂಘದ
ಅಧ್ಯಕ್ಷ ಎಂ. ಕೂಸಪ್ಪ ಗೌಡ ಮುಗುಪ್ಪು ವಹಿಸಿದ್ದರು.

ನೆಮ್ಮದಿ ವೆಲ್ ನೆಸ್ ಸೆಂಟರಿನ ಪ್ರಭಾಕರ ಸಾಲ್ಯಾನ್ ಫೂಟ್ ಪಲ್ಸ್ ಥೆರಪಿ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ಕರುಣಾಕರ ರೈ ನಾಲ್ಗುತ್ತು, ನಿರ್ದೇಶಕರಾದ ಸುಭಾಶ್ಚಂದ್ರ ರೈ ತೋಟ,
ಯುವಕ ಮಂಡಲ ಕಳಂಜ ಇದರ ಅಧ್ಯಕ್ಷ ಶಿವರಾಮ ಕಜೆಮೂಲೆ, ಕಳಂಜ ಬಳಕೆದಾರರ ವೇದಿಕೆಯ ಅಧ್ಯಕ್ಷ ಈಶ್ವರ ವಾರಣಾಶಿ, ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ್ ನಾಯಕ್ ತಡಗಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿವರಾಮ ಕಜೆಮೂಲೆ ಸ್ವಾಗತಿಸಿ, ಈಶ್ವರ್ ವಾರಣಾಸಿ ವಂದಿಸಿದರು. ಸಂಘದ ಸಿಬ್ಬಂದಿ ಗೀತಾಶ್ರೀ ಎಂ. ಕಾರ್ಯಕ್ರಮ ನಿರೂಪಿಸಿದರು.