ಸುಳ್ಯದ ಸಾಂದೀಪ್ ಶಾಲೆಯ ವಿಶೇಷ ಚೇತನ ಮಕ್ಕಳೊಂದಿಗೆ ಒಂದು ದಿನ – ಸ್ಪರ್ಧಾಕೂಟದ ಬಹುಮಾನ ವಿತರಣೆ -ಸಹಭೋಜನ
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ವತಿಯಿಂದ ಸುಳ್ಯದ ಎಂ.ಬಿ. ಫೌಂಡೇಶನ್ ವತಿಯಿಂದ ನಡೆಸಲ್ಪಡುತ್ತಿರುವ ಸಾಂದೀಪ್ ಶಾಲೆಯ ವಿಶೇಷ ಚೇತನ ಮಕ್ಕಳೊಂದಿಗೆ ಒಂದು ದಿನ ವಿನೂತನ ಕಾರ್ಯಕ್ರಮವು ನ.17ರಂದು ಜರುಗಿತು.
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ. ಜಿಲ್ಲಾ ಘಟಕದ ಗೌರವಾಧ್ಯಕ್ಷ ಹಾಗೂ ಸುಳ್ಯ ಸುದ್ದಿ ಬಿಡುಗಡೆ ಪತ್ರಿಕೆಯ ಪ್ರದಾನ ವರದಿಗಾರ ಹರೀಶ್ ಬಂಟ್ವಾಳ್ ಅವರು ಕಾರ್ಯಕ್ರಮವನ್ನು ದೀಪಬೆಳಗಿಸಿ, ಉದ್ಘಾಟಿಸಿ, ಶುಭಹಾರೈಸಿದರು.
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಈಶ್ವರ ವಾರಣಾಶಿ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಎಂ.ಬಿ. ಫೌಂಡೇಶನ್ ಸಂಸ್ಥಾಪಕ ಎಂ.ಬಿ. ಸದಾಶಿವ, ಸಾಂದೀಪ್ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಹರಿಣಿ ಸದಾಶಿವ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ಗೌರವಾಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ, ಕಾರ್ಯದರ್ಶಿ ಶ್ರೀಮತಿ ಜಯಶ್ರೀ ಕೊಯಿಂಗೋಡಿ, ಕೋಶಾಧಿಕಾರಿ ವಿನಯ್ ಜಾಲ್ಸೂರು , ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಕೃಷ್ಣ ಬೆಟ್ಟ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಾಂದೀಪ್ ಶಾಲೆಯ ವಿಶೇಷ ಚೇತನ ಮಕ್ಕಳಿಗೆ ನಡೆಸಿದ ಕ್ರೀಡಾಕೂಟದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಸಭಾ ಕಾರ್ಯಕ್ರಮದಲ್ಲಿ ಕೆ.ಜೆ.ಯು. ಕಾರ್ಯದರ್ಶಿ ಜಯಶ್ರೀ ಕೊಯಿಂಗೋಡಿ ಅವರ ಹುಟ್ಟುಹಬ್ಬವನ್ನು ವಿಶೇಷ ಚೇತನ ಮಕ್ಕಳೊಂದಿಗೆ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಬಳಿಕ ಸಾಂದೀಪ್ ಶಾಲೆಯ ಸಹಶಿಕ್ಷಕರು ಹಾಗೂ ವಿಶೇಷ ಚೇತನ ಮಕ್ಕಳೊಂದಿಗೆ ಸಹಭೋಜನ ನಡೆಸಲಾಯಿತು.
ಕ್ರೀಡಾ ಸ್ಪರ್ಧೆಯ ನಾಲ್ಕು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಬೆಳ್ಳಾರೆಯ ವಿನಾಯಕ ಎಲೆಕ್ಟ್ರಾನಿಕ್ಸ್ ನ ಮಾಲಕರಾದ ವಿನಯ್ ಕುಮಾರ್ ಮತ್ತು ಶ್ರೀಮತಿ ಸೀಮಾ ವಿನಯಕುಮಾರ್ ದಂಪತಿ ಬಹುಮಾನಗಳನ್ನು ಪ್ರಾಯೋಜಕರಾಗಿ ನೀಡಿ ಸಹಕರಿಸಿದರು.
ಕೆ.ಜೆ.ಯು. ಸಂಘದ ಸದಸ್ಯರಾದ ಯಶ್ವಿತ್ ಕಾಳಮ್ಮನೆ ಸ್ವಾಗತಿಸಿ, ಭಾಗೀಶ್ ಕೆ.ಟಿ. ವಂದಿಸಿದರು. ಸುಳ್ಯ ಘಟಕದ ಕೆ.ಜೆ.ಯು. ಮಾಜಿ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ ಕಾರ್ಯಕ್ರಮ ನಿರೂಪಿಸಿದರು.