ಚೊಕ್ಕಾಡಿ ಮಯೂರಿ ಯುವತಿ ಮಂಡಲದ ವತಿಯಿಂದ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

0

ಚೊಕ್ಕಾಡಿ ಮಯೂರಿ ಯುವತಿ ಮಂಡಲ ಹಾಗೂ ಸಮೃದ್ಧಿ ಸ್ತ್ರೀ ಶಕ್ತಿ ಸಂಘದ ವತಿಯಿಂದ ಮಕ್ಕಳ ದಿನಾಚರಣೆಯ ಪ್ರಯುಕ್ತ ಚೊಕ್ಕಾಡಿಯ ಅಂಗನವಾಡಿ ಕೇಂದ್ರದ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಯನ್ನು ನಡೆಸಲಾಯಿತು. ವಿಜೇತರಾದವರಿಗೆ ಹಾಗೂ ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಬಹುಮಾನ ನೀಡಲಾಯಿತು.


ಈ ಕಾರ್ಯಕ್ರಮದಲ್ಲಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ, ಸಹಾಯಕಿ ಮತ್ತು ಮಕ್ಕಳು,ಮಯೂರಿ ಯುವತಿ ಮಂಡಲದ ಸದಸ್ಯರು , ಸ್ತ್ರೀ ಶಕ್ತಿ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು.