ಅವನಿ ಪಳಂಗಾಯ ಹೈಜಂಪ್ ನಲ್ಲಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

0

ಕಡಬ ಸೈಂಟ್ ಆ್ಯನ್ಸ್ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಅವನಿ ಪಳಂಗಾಯ ಹೈಜಂಪ್ ನಲ್ಲಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಉಡುಪಿಯಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಅವನಿ ಪಳಂಗಾಯ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಪಂಜದ ಬಾಲಿಶ್ ಪಳಂಗಾಯ ಮತ್ತು ಶ್ರೀಮತಿ ಲಲಿತಾ ದಂಪತಿಗಳ ಪುತ್ರಿ. ಅವನಿ ಯವರು 4×100 ರಿಲೇ ಯಲ್ಲೂ ಕೂಡ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.