ಕೊಡೊಯಾಲ ಗ್ರಾಮ ಪಂಚಾಯತ್ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2024-25 ನೇ ಸಾಲಿನ ಕ್ರಿಯಾಯೋಜನೆ ತಯಾರಿಸಲು ಗ್ರಾಮ ಸಭೆಯು ನ.18 ರಂದು ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಹರ್ಷನ್ ಕೆ.ಟಿ.ಸಭಾಧ್ಯಕ್ಷತೆ ವಹಿಸಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಸಿ.ವಿ.ಮಾರ್ಗದರ್ಶಿ ಅಧಿಕಾರಿಯಾಗಿದ್ದು ನರೇಗಾ ಯೋಜನೆಯ ಮಾಹಿತಿಯನ್ನು ನೀಡಿದರು.
ವೇದಿಕೆಯಲ್ಲಿ ಉದ್ಯೋಗ ಖಾತರಿ ಯೋಜನೆಯ ತಾಂತ್ರಿಕ ಸಂಯೋಜಕರಾದ ನಿಶಾ, ತಾಂತ್ರಿಕ ಸಹಾಯಕರಾದ ಸುಧನ್ವ ಕೃಷ್ಣ ಉಪಸ್ಥಿತರಿದ್ದು ಮಾಹಿತಿ ನೀಡಿದರು.ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಚಿತ್ರಾ ಹಾಗೂ ಸದಸ್ಯರು ,ಗ್ರಾಮಸ್ಥರು ಗ್ರಾಮ ಸಭೆಯಲ್ಲಿ ಪಾಲ್ಗೊಂಡಿದ್ದರು.