ಸುಳ್ಯ ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘ,ಹಾಗೂ ರಾಷ್ಟ್ರೀಯ ಎ ಗ್ರೇಡ್ ಮ್ಯಾಟ್ ಕಬ್ಬಡ್ಡಿ ಪಂದ್ಯಾಟ ಸಂಘಟನಾ ಸಮಿತಿ,ಆಶ್ರಯದಲ್ಲಿ ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ನಡೆಯುತ್ತಿರುವ ಮೂರು ದಿನಗಳ ಪುರುಷರ ಮತ್ತು ಮಹಿಳೆಯರ ಪ್ರೊ ಮಾದರಿಯ ಕಬಡ್ಡಿ ಪಂದ್ಯಾಟದ ಮೂರನೆಯ ದಿನವಾದ ಇಂದು ಮಹಿಳಾ ತಂಡದ ಪಂದ್ಯಾಟದ ಫೈನಲ್ ಪಂದ್ಯ ನ್ಯಾಷನಲ್ ಬೆಂಗಳೂರು ಮತ್ತು ಟಿಎಂಸಿ ಥಾಣೆ ನಡುವೆ ಹಣಾಹಣಿ ನಡೆಯುತ್ತಿದ್ದು ಚಾಂಪಿಯನ್ ಪಟ್ಟ ಯಾರದಾಗದೆಂಬ ಕಾತುರದಲ್ಲಿ ಪ್ರೇಕ್ಷಕರು ಎದುರು ನೋಡುತ್ತಿದ್ದಾರೆ.