ತೇಜಕುಮಾರ್ ಕಜ್ಜೋಡಿ ನಿಧನ

0

ಹರಿಹರಪಲ್ಲತಡ್ಕದ ಕೃಷಿಕ ತೇಜಕುಮಾರ್ ಕಜ್ಜೋಡಿಯವರು ನ.20 ರಂದು ನಿಧನರಾದರು. ಅವರಿಗೆ 67 ವರ್ಷ ವಯಸ್ಸಾಗಿತ್ತು.
ಅವರಿಗೆ ಕಳೆದ ನಾಲ್ಕು ವರ್ಷಗಳಿಂದ ಡಯಾಲಿಸಿಸ್ ನಡೆಸಲಾಗುತ್ತಿತ್ತು. ಎರಡು ದಿನಗಳ ಹಿಂದೆ ಆರೋಗ್ಯ ತೀವ್ರ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾತ್ರಿ 11.45 ರ ಸುಮಾರಿಗೆ ಅವರು ಕೊನೆಯುಸಿರೆಳೆದರು.
ಮೃತರು ಪತ್ನಿ ಸರಕಾರಿ ಶಾಲಾ ಶಿಕ್ಷಕಿಯಾಗಿರುವ ಶ್ರೀಮತಿ ತಾರಾಮತಿ ಕಜ್ಜೋಡಿ, ಪುತ್ರರಾದ ಪ್ರಜ್ವಲ್ ಮತ್ತು ಉಜ್ವಲ್ ಹಾಗೂ ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.