ಅರಂಬೂರು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

0

ಅರಂಬೂರು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯ ಕಾರ್ಯಕ್ರಮವು ನ.18 ರಂದು ನಡೆಯಿತು. ಅಂಗನವಾಡಿ ಪುಟಾಣಿಗಳು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.


ಈ ಕಾರ್ಯಕ್ರಮದಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ಗೀತಾ ಅಂಜಿಕ್ಕಾರ್, ಮಹಿಳಾ ಮಂಡಲ ಅಧ್ಯಕ್ಷೆ ಅಮಿತಾ ರೈ ಅರಂಬೂರು, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಲಾವಣ್ಯ ಪಿ.ಪಿ, ಅಂಗನವಾಡಿ ಕಾರ್ಯಕರ್ತೆ ಗೀತಾ ಲಕ್ಷ್ಮಿ, ಅಂಗನವಾಡಿ ಸಹಾಯಕಿ ಗೀತಾ, ಇಡ್ಯಡ್ಕ ಶಾಲಾ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮಿ, ಆಶಾ ಕಾರ್ಯಕರ್ತೆ ಸುಮತಿ, ಮಕ್ಕಳ ಪೋಷಕರು, ಪುಟಾಣಿ ಮಕ್ಕಳು ಭಾಗವಹಿಸಿದರು.