ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಪಿ.ಡಿ.ಒ ಶ್ಯಾಮ್ ಪ್ರಸಾದ್ ಅಧಿಕಾರ ಸ್ವೀಕಾರ

0

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಐವರ್ನಾಡು ಗ್ರಾಮ ಪಂಚಾಯತ್ ಪಿಡಿಒ ಶ್ಯಾಮ್ ಪ್ರಸಾದ್ ರವರು ನ
20 ರಂದು ಅಧಿಕಾರ ಸ್ವೀಕರಿಸಿದರು.


ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ 3 ವರ್ಷದ ಅವಧಿ ಮುಗಿದಿರುವುದರಿಂದ ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಇಲಾಖೆ ಮಂಗಳೂರು ಇವರ ಆದೇಶದಂತೆ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ ಮಡ್ತಿಲ ಇವರಿಂದ ಶ್ಯಾಮ್ ಪ್ರಸಾದ್ ಇವರು ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು.